ಚಾಮರಾಜನಗರ | ಚಾಲಕನಿಗೆ ಮೂರ್ಛೆ ಬಂದು ಮರಕ್ಕೆ ಢಿಕ್ಕಿ ಹೊಡೆದ ಬಸ್; ಐವರಿಗೆ ಗಾಯ

ಚಾಮರಾಜನಗರ: ಚಾಲಕ ಮೂರ್ಛೆ ಬಿದ್ದು ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್ ಮರಕ್ಕೆ ಢಿಕ್ಕಿ ಹೊಡೆದು ಪ್ರಯಾಣಿಕರು ಗಾಯಗೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ ರವಿವಾರ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಒಡೆಯರಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ಇದಾಗಿದ್ದು, ಚಾಲಕನಿಗೆ ದಿಢೀರ್ ಮೂರ್ಛೆ ರೋಗ ಕಾಣಿಸಿಕೊಂಡಿದೆ. ಪರಿಣಾಮ, ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿದೆ. ಬಸ್‌ನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಮುಂಭಾಗದಲ್ಲಿ ಕುಳಿತಿದ್ದ ಐವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
Next Story