ಪಬ್ಲಿಕ್ ಪರೀಕ್ಷೆಯಲ್ಲಿ ನಕಲು ಮಾಡಲು ವಿದ್ಯಾರ್ಥಿಗಳಿಗೆ ಸಹಕರಿಸಿದ ಮೇಲ್ವಿಚಾರಕ; ವೀಡಿಯೊ ವೈರಲ್
ಚಾಮರಾಜನಗರ : ಹತ್ತನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ವಿಷಯದಲ್ಲಿ ಕಾಪಿ ಮಾಡಲು ಪರೀಕ್ಷಾ ಕೊಠಡಿಯ ಮೇಲ್ವಿಚಾರಕರೊಬ್ಬರು ಸಹಕರಿಸಿದ ಘಟನೆ ಕರ್ನಾಟಕ ಹನೂರು ತಾಲೂಕಿನ ಖಾಸಗಿ ಶಾಲೆಯೊಂದರಲ್ಲಿ ನೆದಿರುವ ಬಗ್ಗೆ ವರದಿಯಾಗಿದೆ.
ಹನೂರು ಪಟ್ಟಣದ ಕ್ರಿಸ್ತರಾಜ ಶಾಲೆಯಲ್ಲಿ ಏಪ್ರಿಲ್ 6 ರಂದು ನಡೆದ ಹತ್ತನೇ ತರಗತಿ ಯ ಇಂಗ್ಲಿಷ್ ವಿಷಯದ ಪಬ್ಲಿಕ್ ಪರೀಕ್ಷೆಯಲ್ಲಿ ಮೇಲ್ವಿಚಾರಕರೊಬ್ಬರು ವಿದ್ಯಾರ್ಥಿಗಳಿಗೆ ಕಾಪಿ ಮಾಡಲು ಸಹಕಾರ ನೀಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೀಡಿಯೊ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.
ಖಾಸಗಿ ಶಾಲೆಗಳಲ್ಲಿ ಪಬ್ಲಿಕ್ ಪರೀಕ್ಷೆಯಲ್ಲೂ ಅಕ್ರಮದ ನಡೆಯುತ್ತಿರುವುದು ಬಹಿರಂಗವಾಗುತ್ತಿದೆ. ಆದರೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮಾತ್ರ ಕ್ರಮಕೈಗೊಳ್ಳದೇ ಮೌನವಾಗಿದ್ದಾರೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
Next Story