Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಚೈತ್ರ ಗ್ಯಾಂಗ್​ನಿಂದ ವಂಚನೆ ಪ್ರಕರಣ |...

ಚೈತ್ರ ಗ್ಯಾಂಗ್​ನಿಂದ ವಂಚನೆ ಪ್ರಕರಣ | ಜಾಮೀನಿನ ಮೇಲೆ ಹೊರ ಬಂದ ಆರೋಪಿಯಿಂದ ಸಾಕ್ಷಿ ಮೇಲೆ ಹಲ್ಲೆ; ಎಸ್ಪಿಗೆ ದೂರು

ವಾರ್ತಾಭಾರತಿವಾರ್ತಾಭಾರತಿ27 March 2024 8:06 PM IST
share
ಚೈತ್ರ ಗ್ಯಾಂಗ್​ನಿಂದ ವಂಚನೆ ಪ್ರಕರಣ | ಜಾಮೀನಿನ ಮೇಲೆ ಹೊರ ಬಂದ ಆರೋಪಿಯಿಂದ ಸಾಕ್ಷಿ ಮೇಲೆ ಹಲ್ಲೆ; ಎಸ್ಪಿಗೆ ದೂರು

ಚಿಕ್ಕಮಗಳೂರು: ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಆತನಿಂದ ಕೋಟ್ಯಂತರ ರೂ. ಪಡೆದು ವಂಚನೆ ಮಾಡಿದ ಚೈತ್ರಾ ಪ್ರಕರಣದ ಪ್ರಮುಖ ಆರೋಪಿ ಧನ್‍ ರಾಜ್ ಎಂಬಾತ, ವಂಚನೆ ಪ್ರಕರಣದ ಸಾಕ್ಷಿಯಾದ ಸಲೂನ್ ಮಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ಕಳೆದ ಸೋಮವಾರ ಕಡೂರು ಪಟ್ಟಣದಲ್ಲಿ ನಡೆದಿದೆ. ಹಲ್ಲೆ ಘಟನೆ ಸಂಬಂಧ ಬೀರೂರು ಪೊಲೀಸರಿಗೆ ದೂರು ನೀಡಿದರೂ ಪ್ರಕರಣ ದಾಖಲಿಸಿಕೊಂಡಿಲ್ಲ ಎಂದು ಆರೋಪಿಸಿ ಸಲೂನ್ ಮಾಲಕ ಬುಧವಾರ ಎಸ್ಪಿಗೆ ದೂರು ನೀಡಿದ್ದಾರೆ.

ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಿಧಾನಸಭೆ ಟಿಕೆಟ್ ಕೊಡಿಸುವುದಾಗಿ ನಂಬಿಸಿದ್ದ ಚೈತ್ರಾ ಹಾಗೂ ಆಕೆಯ ಸಹಚರರು, ನಕಲಿ ಪಾತ್ರಧಾರಿಗಳನ್ನು ಸೃಷ್ಟಿಸಿ ಉದ್ಯಮಿಯನ್ನು ನಂಬಿಸಿದ್ದರು. ಟಿಕೆಟ್ ಸಿಗುವ ನಂಬಿಕೆಯಿಂದ ಉದ್ಯಮಿ ಚೈತ್ರಾ ಗ್ಯಾಂಗ್‍ಗೆ 5 ಕೋಟಿ ಹಣ ನೀಡಿದ್ದರು. ತಾನು ವಂಚನೆಗೊಳಗಾಗಿರುವುದನ್ನು ಅರಿತ ಉದ್ಯಮಿ ಗೋವಿಂದ ಪೂಜಾರಿ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಕೈಗೊಂಡ ಪೊಲೀಸರು ವಂಚನೆ ಪ್ರಕರಣದ ಆರೋಪಿಗಳಾದ ಚೈತ್ರಾ , ಧನ್‍ರಾಜ್ ಹಾಗೂ ಇತರರನ್ನು ಬಂಧಿಸಿದ್ದರು.

ಈ ಪ್ರಕರಣದಲ್ಲಿ ಕಳೆದ ತಿಂಗಳು ಜಾಮೀನು ಪಡೆದುಕೊಂಡಿರುವ ಪ್ರಮುಖ ಆರೋಪಿ ಧನ್‍ರಾಜ್, ಕಳೆದ ಸೋಮವಾರ ಕಡೂರಿನ ಹೊಟೇಲ್‍ವೊಂದಕ್ಕೆ ಸಲೂನ್ ನಡೆಸುತ್ತಿರುವ ಪ್ರಕರಣದ ಪ್ರಮುಖ ಸಾಕ್ಷಿ ರಾಮು ಎಂಬವರನ್ನು ಕರೆಸಿಕೊಂಡಿದ್ದಾನೆ. ಅಲ್ಲದೆ ಪ್ರಕರಣದ ಬಗ್ಗೆ ಮಾಧ್ಯಮದವರಿಗೆ ಮಾಹಿತಿ ನೀಡಿದ ಕಾರಣಕ್ಕೆ ಹಲ್ಲೆ ನಡೆಸಿದ್ದಲ್ಲೇ, ನ್ಯಾಯಾಲಯದಲ್ಲಿ ಸಾಕ್ಷಿ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆಂದು ತಿಳಿದು ಬಂದಿದೆ. ಈ ಹಲ್ಲೆ ಪ್ರಕರಣ ಸಂಬಂಧ ರಾಮು, ಬೀರೂರು ಪೊಲೀಸರಿಗೆ ದೂರು ನೀಡಿದ್ದರೂ ಪೊಲೀಸರು ದೂರು ದಾಖಲಿಸಿಕೊಂಡಿಲ್ಲ ಎಂದು ಎಸ್ಪಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾನೆ ಎನ್ನಲಾಗಿದೆ.

ವಂಚನೆ ಪ್ರಕರಣ ಬೆಳಕಿಗೆ ಬಂದ ಬಳಿಕ ಆರೋಪಿಗಳನ್ನು ಬಂಧಿಸಿ ತನಿಖೆ ಆರಂಭಿಸಿ ಪೊಲೀಸರು, ಕಡೂರು ಪಟ್ಟಣದಲ್ಲಿ ಸಲೂನ್ ನಡೆಸುತ್ತಿದ್ದ ರಾಮು ಎಂಬಾತನನ್ನು ವಿಚಾರಣೆಗೊಳಪಡಿಸಿದ್ದರು. ಚೈತ್ರಾ ನಿರ್ದೇಶನದಂತೆ ಆರೋಪಿ ಧನ್‍ರಾಜ್, ಚೆನ್ನಾ ನಾಯ್ಕ್ ಎಂಬಾತನನ್ನು ರಾಮು ನಡೆಸುತ್ತಿದ್ದ ಸಲೂನ್‍ಗೆ ಕರೆತಂದು ಆತನಿಗೆ ಗೋಪಾಲ್ ಜೀ ಎಂಬವರ ಪೊಟೊ ತೋರಿಸಿ ಅವರಂತೆ ಮೇಕಪ್, ಹೇರ್ ಸ್ಟೈಲ್ ಮಾಡುವಂತೆ ಹೇಳಿದ್ದ. ಧನ್‍ರಾಜ್ ಹೇಳಿದಂತೆ ರಾಮು ಮೇಕಪ್ ಮಾಡಿದ್ದನ್ನು ಪೊಲೀಸರಿಗೆ ತಿಳಿಸಿದ್ದು, ಈ ಬಗ್ಗೆ ರಾಮು ಮಾಧ್ಯಮದವರಿಗೂ ಹೇಳಿಕೆ ನೀಡಿದ್ದ. ಈ ಹಿನ್ನೆಲೆಯಲ್ಲಿ ರಾಮು ಚೈತ್ರಾ‌ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದ್ದರು.

ಇತ್ತೀಚೆಗೆ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದ ಧನ್‍ರಾಜ್, ಕಡೂರಿನಲ್ಲಿ ಹೊಟೇಲ್‍ವೊಂದಕ್ಕೆ ರಾಮುನನ್ನು ಕರೆಸಿಕೊಂಡು, ನ್ಯಾಯಾಲಯದಲ್ಲಿ ಸಾಕ್ಷಿ ಹೇಳದಂತೆ ಬೆದರಿಕೆ ಹಾಕಿ ಹಲ್ಲೆ ಮಾಡಿದ್ದಾರೆ ಎಂದು ರಾಮು ಆರೋಪಿಸಿದ್ದಾರೆ. ಬುಧವಾರ ಕುಟುಂಬ ಸಹಿತ ನಗರದ ಎಸ್ಪಿ ಕಚೇರಿಗೆ ಆಗಮಿಸಿ, ಘಟನೆ ಸಂಬಂಧ ಬೀರೂರು ಪೊಲೀಸರಿಗೆ ದೂರು ನೀಡಿದರೂ ಕಾನೂನು ಕ್ರಮ ಕೈಗೊಂಡಿಲ್ಲ ಎಂದು ದೂರು ನೀಡಿದ್ದಾರೆ. ಹಲ್ಲೆ ಮಾಡಿದ ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಂಡು ತನಗೆ ಹಾಗೂ ತನ್ನ ಕುಟುಂಬಕ್ಕೆ ರಕ್ಷಣೆ ನೀಡಬೇಕೆಂದು ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X