ಚಿಕ್ಕಮಗಳೂರು | ಕಡವೆ ಶಿಖಾರಿ ಮಾಡಿದ್ದ ವ್ಯಕ್ತಿಯ ಬಂಧನ; 2 ಕೋವಿ ವಶ
ಚಿಕ್ಕಮಗಳೂರು : ಕಡವೆ ಶಿಕಾರಿ ಮಾಡಿದ್ದ ವ್ಯಕ್ತಿ ಓರ್ವನನ್ನು ಬಂಧಿಸಿರುವ ಅರಣ್ಯ ಸಂಚಾರಿ ದಳ ವಾಹನ ಸಹಿತ ಎರಡು ಕೋವಿ ವಶಪಡಿಸಿಕೊಂಡಿದೆ.
ಚಿಕ್ಕಮಗಳೂರು ವಲಯದ ಅತ್ತಿಗಿರಿ ಸೆಕ್ಷನ್, ತೋಗರಿಹಂಕಲ್ ಗ್ರಾಮದ ಕೂತನ್ಕುಲ್ ಎಸ್ಟೇಟ್ ನಲ್ಲಿ ಇಂದು ನಸುಕಿನಲ್ಲಿ ತೋಟದ ರೈಟರ್ ದೇವಯ್ಯ ಕಡವೆ ಶಿಖಾರಿ ಮಾಡಿದ್ದ. ಶಿಕಾರಿ ಬಳಿಕ ಮಾಂಸವನ್ನು ತುಂಡು ಮಾಡುತ್ತಿದ್ದಾಗ ಅರಣ್ಯ ಸಂಚಾರಿ ದಳದವರು ದಾಳಿ ಮಾಡಿ ದೇವಯ್ಯ ರನ್ನು ಬಂಧಿಸಿದ್ದಾರೆ. ಅಂದಾಜು 40 ಕೆ.ಜಿ ಮಾಂಸ ಮತ್ತು ಚರ್ಮ, ಚೂರಿ ಹಾಗೂ ಬೇಟೆಗೆ ಬಳಸುತ್ತಿದ್ದ 2 ಕೋವಿಗಳನ್ನು ಗಳನ್ನು ವಶಕ್ಕೆ ಪಡೆದಿದ್ದಾರೆ.
ಪೊಲೀಸರು ವನ್ಯಜೀವಿ ಹಾಗೂ ಅರಣ್ಯ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿದ್ದಾರೆ.
Next Story