ಚಿಕ್ಕಮಗಳೂರು | ಕಾಫಿ ತೋಟದಲ್ಲಿ ಗಾಂಜಾ ಗಿಡಗಳನ್ನು ಬೆಳೆದ ಆರೋಪ : ಓರ್ವನ ಬಂಧನ
ಚಿಕ್ಕಮಗಳೂರು: ಕಾಫಿ ತೋಟವೊಂದರಲ್ಲಿ ಕಾಫಿಗಿಡಗಳ ಮಧ್ಯೆ ಗಾಂಜಾ ಗಿಡಗಳನ್ನು ಬೆಳೆದ ಆರೋಪದ ಮೇಲೆ ತೋಟದ ಮಾಲಕನನ್ನು ಸಿಇಎನ್ ಪೊಲೀಸರು ಬಂಧಿಸಿರುವ ಘಟನೆ ಬುಧವಾರ ಸಂಜೆ ತಾಲೂಕಿನ ಕೆಳಹೊಲಗದ್ದೆ ಗ್ರಾಮದಲ್ಲಿ ವರದಿಯಾಗಿದೆ.
ಬಂಧಿತ ಅರೋಪಿಯನ್ನು ಕೆಳಹೊಲಗದ್ದೆ ಗ್ರಾಮದ ನಿವಾಸಿ ರಾಜೇಂದ್ರ ಎಂದು ಗುರುತಿಸಲಾಗಿದೆ.
ಆರೋಪಿ ರಾಜೇಂದ್ರ ಕಾಫಿತೋಟದ ಕಾಫಿ ಗಿಡಗಳ ಮಧ್ಯೆ ಕೆಲ ತಿಂಗಳುಗಳ ಹಿಂದೆ ಗಾಂಜಾ ಗಿಡಗಳನ್ನು ಬೆಳೆದಿದ್ದ. ಬುಧವಾರ ಸಂಜೆ ಖಚಿತ ಮಾಹಿತಿ ಮೇರೆಗೆ ಸಿಇಎಸ್ ಪೊಲೀಸರು ಕಾಫಿ ತೋಟದ ಮೇಲೆ ದಿಢೀರ್ ದಾಳಿ ನಡೆಸಿದಾಗ ತೋಟದಲ್ಲಿ ಗಾಂಜಾ ಗಿಡಗಳು ಪತ್ತೆಯಾಗಿವೆ ಎಂದು ಹೇಳಲಾಗಿದೆ. ದಾಳಿ ವೇಳೆ 100 ಗ್ರಾಂ. ಹಸಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದು, ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
Next Story