ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಸಿ.ಟಿ.ರವಿ ವಿರುದ್ಧ ಪ್ರಕರಣ ದಾಖಲು
ಚಿಕ್ಕಮಗಳೂರು : ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹರಿಬಿಟ್ಟಿರುವ ಸಂಬಂಧ ಮಾಜಿ ಸಚಿವ ಸಿ.ಟಿ.ರವಿ ವಿರುದ್ಧ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣಗಳು ದಾಖಲಾಗಿವೆ.
ಸಿ.ಟಿ.ರವಿ ತಮ್ಮ ಎಕ್ಸ್ ಖಾತೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆ ವಿರುದ್ದ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದರು. ಈ ಹಿನ್ನಲೆ ಪ್ರಜಾಪ್ರತಿನಿಧಿ ಕಾಯ್ದೆಯಡಿಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಕೆ.ಜಯಲಕ್ಷ್ಮಮ್ಮ ನೀಡಿರುವ ದೂರಿನ ಆಧಾರದ ಮೇಲೆ ಪ್ರತ್ಯೇಕ ಎರಡು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.
Next Story