ಚಿಕ್ಕಮಗಳೂರು | ಕಾಫಿ ಕೊಯ್ಲು ಮಾಡುತ್ತಿದ್ದಾಗ ಕಾಡಾನೆ ದಾಳಿ; ಕಾರ್ಮಿಕ ಮಹಿಳೆ ಮೃತ್ಯು

ವಿನೋದಾ ಬಾಯಿ (39)
ಚಿಕ್ಕಮಗಳೂರು : ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಕತ್ತಲೇಖಾನ್ ಎಸ್ಟೇಟ್ನಲ್ಲಿ ನಡೆದಿದೆ.
ವಿಜಯನಗರ ಜಿಲ್ಲೆಯ ಹರಪನಹಳ್ಳಿ ಮೂಲದ ವಿನೋದಾ ಬಾಯಿ (39) ಮೃತ ಕಾರ್ಮಿಕ ಮಹಿಳೆ ಎಂದು ತಿಳಿದು ಬಂದಿದೆ. ಇಂದು(ಶನಿವಾರ) ಬೆಳಗ್ಗೆ ಕಾಫಿ ಕೊಯ್ಯುವಾಗ ಏಕಾಏಕಿ ಕಾಡಾನೆ ದಾಳಿ ನಡೆಸಿದೆ, ಪರಿಣಾಮ ಮಹಿಳೆ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story