ಕಡೂರು | ನಡು ರಸ್ತೆಯಲ್ಲೇ ಹೊತ್ತಿ ಉರಿದ ಲಾರಿ; ಚಾಲಕ ಅಪಾಯದಿಂದ ಪಾರು
ಚಿಕ್ಕಮಗಳೂರು: ನಡು ರಸ್ತೆಯಲ್ಲೇ ಲಾರಿಯೊಂದು ಹೊತ್ತಿ ಉರಿದ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಮಂಜೀಹಳ್ಳಿ ಸಮೀಪ ನಡೆದಿದೆ.
ಬೆಂಕಿಯ ಕೆನ್ನಾಲಿಗೆಗೆ ಲಾರಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಚಿಕ್ಕಮಗಳೂರಿನಿಂದ ಅರಸೀಕೆರೆಗೆ ಹೋಗುತ್ತಿದ್ದ ಲಾರಿ, ನಿನ್ನೆ ಸಂಜೆ 5 ಗಂಟೆ ವೇಳೆ ಕೆಟ್ಟು ನಿಂತಿತ್ತು. ಹೀಗಾಗಿ ಬೆಳಗ್ಗೆ ರಿಪೇರಿಗೆ ಜನ ಬರುತ್ತಾರೆಂದು ಲಾರಿಯಲ್ಲೇ ಚಾಲಕ ಮಲಗಿದ್ದ. ಮಧ್ಯ ರಾತ್ರಿ 12:30 ರ ಸುಮಾರಿಗೆ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಲಾರಿಯಿಂದ ಚಾಲಕ ಇಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶಾರ್ಟ್ ಸರ್ಕ್ಯೂಟ್ ಲಾರಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ.
ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ ಎಂದು ತಿಳಿದು ಬಂದಿದೆ.
Next Story