ಮೂಡಿಗೆರೆ | ಕರ್ತವ್ಯ ಲೋಪ ಆರೋಪ: ಪ್ರಭಾರಿ ಮುಖ್ಯ ಶಿಕ್ಷಕಿಯ ಅಮಾನತು

ಸಾಂದರ್ಭಿಕ ಚಿತ್ರ
ಚಿಕ್ಕಮಗಳೂರು: ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಪ್ರಭಾರಿ ಮುಖ್ಯ ಶಿಕ್ಷಕಿಯನ್ನು ಅಮಾನತುಗೊಳಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಮೂಡಿಗೆರೆ ತಾಲೂಕು ಕಿತ್ತಲೆಗಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಎಚ್.ಎಸ್.ಶೀಲರಾಣಿ ಅಮಾನತುಗೊಂಡ ಶಿಕ್ಷಕಿ.
ಶಾಲಾ ಸಮಯದಲ್ಲಿ ಅತಿಯಾದ ಮೊಬೈಲ್ ಫೋನ್ ಬಳಕೆ, ಪಠ್ಯ ಚಟುವಟಿಕೆಗಳಲ್ಲಿ ನಿರುತ್ಸಾಹ, ಬಿಸಿಯೂಟ ಯೋಜನೆಯಲ್ಲಿ ಅವ್ಯವಹಾರ, ಲೆಕ್ಕಪತ್ರಗಳ ತಪ್ಪು ನಿರ್ವಹಣೆ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಶೀಲರಾಣಿ ವಿರುದ್ಧ ಶಾಲಾ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು ಹಾಗೂ ಸ್ಥಳೀಯರು ಶಿಕ್ಷಣ ಇಲಾಖೆಗೆ ದೂರು ಸಲ್ಲಿಸಿದ್ದು, ತನಿಖೆಯಿಂದ ಆರೋಪಗಳು ಮೇಲ್ನೋಟಕ್ಕೆ ದೃಢಪಟ್ಟಿವೆ.
ಹತ್ತಕ್ಕೂ ಹೆಚ್ಚು ಆರೋಪಗಳನ್ನು ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.
Next Story