ಚಿಕ್ಕಮಗಳೂರು | ವಿದ್ಯುತ್ ತಂತಿ ಸರಿಪಡಿಸುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಮೃತ್ಯು
ಜೀವಿತ್(23)
ಚಿಕ್ಕಮಗಳೂರು : ಭಾರೀ ಮಳೆಯಿಂದಾಗಿ ಜೋತು ಬಿದ್ದಿದ್ದ ವಿದ್ಯುತ್ ತಂತಿ ಸರಿಪಡಿಸಲು ಹೋದ ವೇಳೆ ವಿದ್ಯುತ್ ಪ್ರವಹಿಸಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಮಂಗಳವಾರ ಸಂಜೆ ತಾಲೂಕಿನ ಗಂಜಲಗೋಡು ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಗಂಲಗೋಡು ಗ್ರಾಮದ ನಿವಾಸಿ ಜೀವಿತ್(23) ಮೃತ ಯುವಕನಾಗಿದ್ದು, ಕಳೆದ ರಾತ್ರಿ ಗ್ರಾಮದಲ್ಲಿ ಸುರಿದ ಭಾರೀ ಮಳೆ ಗಾಳಿಯಿಂದಾಗಿ ಜೀವಿತ್ ಮನೆಗೆ ವಿದ್ಯುತ್ ಸಂಪರ್ಕ ನೀಡಲಾಗಿದ್ದ ವಿದ್ಯುತ್ ತಂತಿ ತೋತು ಬಿದ್ದಿತ್ತು. ಮಂಗಳವಾರ ಜೋತು ಬಿದ್ದಿದ್ದ ವಿದ್ಯುತ್ ತಂತಿಯನ್ನು ಯಾವುದೇ ಮುನ್ನೆಚ್ಚರಿಕೆ ಕ್ರಮವಹಿಸದೆ ಸರಿಪಡಿಸಲು ಜೀವಿತ್ ಮುಂದಾಗಿದ್ದ ಎನ್ನಲಾಗಿದೆ. ತಂತಿ ಸರಿಪಡಿಸಲು ಮುಂದಾಗಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ.
Next Story