ತರೀಕೆರೆ: ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ತರೀಕೆರೆ: ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ(SIO) ಮತ್ತು ಬೋರ್ಡ್ ಆಫ್ ಇಸ್ಲಾಮಿಕ್ ಎಜ್ಯುಕೇಶನ್ ಕರ್ನಾಟಕ(BIE) ಇದರ ತರೀಕೆರೆ ಘಟಕದ ವತಿಯಿಂದ ಕಳೆದ (2023-24) ಸಾಲಿನ ಎಸೆಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿ ಗಳಿಸಿದ ಮತ್ತು BIE ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.
ತರೀಕೆರೆ ಪಟ್ಟಣದ ಹೋಟೆಲ್ ಅರಮನೆಯಲ್ಲಿ ಶನಿವಾರ ಜರುಗಿದ ಕಾರ್ಯಕ್ರಮದಲ್ಲಿ ಬೆಳಗ್ಗೆ BIE ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು.
ಪ್ರಾಸ್ತಾವಿಕವಾಗಿ ಮಾತನಾಡಿದ ಬಿಐಇ ರಾಜ್ಯ ಕಾರ್ಯದರ್ಶಿ ರಿಯಾಝ್ ಅಹ್ಮದ್ ರೋಣ BIE ಪರಿಚಯ ಮತ್ತು ಅದರ ಧ್ಯೇಯೋದ್ದೇಶಗಳನ್ನು ವಿವರಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜಮಾಅತೇ ಇಸ್ಲಾಮೀ ಹಿಂದ್ ರಾಜ್ಯ ಕಾರ್ಯದರ್ಶಿ ಅಕ್ಬರ್ ಅಲಿ ಉಡುಪಿ ಶಿಕ್ಷಣದ ಆವಶ್ಯಕತೆ ಮತ್ತು ಅದರ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳನ್ನು ಪ್ರಶಸ್ತಿ ಪತ್ರ ಮತ್ತು ಬಹುಮಾನಗಳೊಂದಿಗೆ ಪುರಸ್ಕರಿಸಲಾಯಿತು.
ಅಪರಾಹ್ನ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಪಟ್ಟಣದ ಎಸೆಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ತರೀಕೆರೆ ಶಾಸಕ ಶ್ರೀನಿವಾಸ್ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಪ್ರೋತ್ಸಾಹಿಸಿದರು.
ಅಕ್ಬರ್ ಅಲಿ ಉಡುಪಿ ಮತ್ತು ರಿಯಾಝ್ ಅಹ್ಮದ್ ರೋಣ್ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳೊಂದಿಗೆ ಪೋಷಕರೂ ಭಾಗವಹಿಸಿದ್ದರು.