ಚಿಕ್ಕಮಗಳೂರು| ಆಕಸ್ಮಿಕ ಬೆಂಕಿ ಅವಘಡ: ಮಹಿಳೆಗೆ ಗಂಭೀರ ಗಾಯ, ಮನೆ ಸಂಪೂರ್ಣ ಸುಟ್ಟು ಭಸ್ಮ

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕು ಮಾಳಿಗನಾಡು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಬಹುತೇಕ ನಾಶವಾಗಿದ್ದು, ಹತ್ತಾರು ಮೂಟೆ ಕಾಫಿ ಬೀಜಗಳು ಕೂಡಾ ಬೆಂಕಿಗಾಹುತಿಯಾಗಿವೆ.
ಅಗ್ನಿ ಅವಘಡ ಸಂದರ್ಭ ಮನೆಯಲ್ಲಿ ಇದ್ದ ರೇಖಾ ಎಂಬವರು (36) ತೀವ್ರವಾಗಿ ಗಾಯಗೊಂಡಿದ್ದಾರೆ.
ಅಡುಗೆಗೆ ಸ್ಟವ್ ಹಚ್ಚುವ ವೇಳೆ ಅಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯಕ್ಕೆ ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Next Story