ನಾಯಿ ಕಚ್ಚಿದ್ದ ಪ್ರಕರಣ: ವಿಚಾರಣೆಗೆ ಹಾಜರಾದ ನಟ ದರ್ಶನ್
ಬೆಂಗಳೂರು: ಮಹಿಳೆಯೊಬ್ಬರಿಗೆ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರಿಗೆ ಆರ್'ಆರ್ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ದಿನದ ಒಳಗೆ ವಿಚಾರಣೆಗೆ ಹಾಜರಾಗುವಂತೆ ಆರ್'ಆರ್ ನಗರ ಪೊಲೀಸರು ದರ್ಶನ್ ಅವರಿಗೆ ನವೆಂಬರ್ 11 ರಂದು ನೋಟಿಸ್ ಜಾರಿ ಮಾಡಿದ್ದರು.
́ವಿಚಾರಣೆಗೆ ಹಾಜರಾಗದಿದ್ದರೆ ಕಾನೂನು ಅನ್ವಯ ಕ್ರಮ ಕೈಗೊಳ್ಳಲಾಗುವುದು’ ಎಂದು ನೋಟಿಸ್ನಲ್ಲಿ ತಿಳಿಸಲಾಗಿತ್ತು.
ಘಟನೆ ವಿವರ: ಕಳೆದ ಅಕ್ಟೋಬರ್ 28 ರಂದು ಆರ್.ಆರ್ ನಗರದಲ್ಲಿ ಆಸ್ಪತ್ರೆ ಕಾರ್ಯಕ್ರಮವೊಂದಕ್ಕೆ ಮಹಿಳೆ ಆಗಮಿಸಿದ್ದರು. ದರ್ಶನ್ ಮನೆಯ ಬಳಿ ಖಾಲಿ ಜಾಗದಲ್ಲಿ ತಮ್ಮ ಕಾರನ್ನು ಮಹಿಳೆ ನಿಲ್ಲಿಸಿದ್ದರು. ಕಾರ್ಯಕ್ರಮ ಮುಗಿಸಿ ಮರಳಿ ಬಂದಾಗ ಕಾರು ನಿಲ್ಲಿಸಿದ್ದ ಜಾಗದಲ್ಲಿ ಮೂರು ನಾಯಿಗಳು ಇದ್ದವು. ದರ್ಶನ್ರ ಮನೆ ಸಿಬ್ಬಂದಿಗೆ ನಾಯಿಗಳನ್ನು ಪಕ್ಕಕ್ಕೆ ಕರೆದುಕೊಳ್ಳುವಂತೆ ಮಹಿಳೆ ಕೇಳಿದ್ದಾರೆ. ಆಗ ವಾಗ್ವಾದ ನಡೆಸಿರುವ ದರ್ಶನ್ ಮನೆಯ ಸಿಬ್ಬಂದಿ, ಈ ಜಾಗದಲ್ಲಿ ನೀವು ಕಾರು ಪಾರ್ಕ್ ಮಾಡುವಂತಿಲ್ಲ ಎಂದಿದ್ದಾರೆ. ಮಹಿಳೆ ಹಾಗೂ ದರ್ಶನ್ರ ಸಿಬ್ಬಂದಿ ನಡುವೆ ವಾಗ್ವಾದ ನಡೆದಿದೆ. ಬಳಿಕ ನಾಯಿಗಳು ಮಹಿಳೆಯ ಮೇಲೆ ದಾಳಿ ನಡೆಸಿ ಹೊಟ್ಟೆ ಹಾಗೂ ಕೈಗೆ ಕಡಿದು ಗಾಯಗೊಳಿಸಿವೆ ಎಂದು ದೂರುದಾರ ಅಮಿತಾ ಜಿಂದಾಲ್ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.