ಹಿರಿಯ ನಟ ಮಿಥುನ್ ಚಕ್ರವರ್ತಿ ಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ಮಿಥುನ್ ಚಕ್ರವರ್ತಿ (PTI)
ಹೊಸದಿಲ್ಲಿ: ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಆಯ್ಕೆಯಾಗಿದ್ದಾರೆ.
ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಈ ಕುರಿತು ಎಕ್ಸ್ ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದು, ಮಿಥುನ್ ಅವರ ಗಮನಾರ್ಹ ಸಿನಿಮೀಯ ಪ್ರಯಾಣವು ತಲೆಮಾರುಗಳಿಗೆ ಸ್ಫೂರ್ತಿ ನೀಡುತ್ತದೆ. ಚಲನಚಿತ್ರ ಕ್ಷೇತ್ರಕ್ಕೆ ನೀಡಿದ ಅಪ್ರತಿಮ ಕೊಡುಗೆ ಪರಿಗಣಿಸಿ ಖ್ಯಾತ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿ ಪ್ರಶಸ್ತಿ ನೀಡಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.
2024ರ ಅ.8ರಂದು ನಡೆಯಲಿರುವ 70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ನಟ ಮಿಥುನ್ ಚಕ್ರವರ್ತಿ ಅವರಿಗೆ ಪ್ರಶಸ್ತಿ ಪ್ರಧಾನ ನಡೆಯಲಿದೆ.
ಈ ಮೊದಲು ಮಿಥುನ್ಗೆ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಮೃಣಾಲ್ ಸೇನ್ ಮೃಗಯಾ ಸಿನಿಮಾದೊಂದಿಗೆ ಮಿಥುನ್ ಚಕ್ರವರ್ತಿ ತನ್ನ ವೃತ್ತಿಜೀವನವನ್ನು ಪ್ರಾರಂಭಿಸಿದ್ದರು.
Next Story