Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕ್ಯಾಂಪ್ಕೊ ಸಂಸ್ಥೆಗೆ 22 ಕೋಟಿ ರೂ. ಲಾಭ:...

ಕ್ಯಾಂಪ್ಕೊ ಸಂಸ್ಥೆಗೆ 22 ಕೋಟಿ ರೂ. ಲಾಭ: ಕಿಶೋರ್ ಕುಮಾರ್ ಕೊಡ್ಗಿ

ವಾರ್ತಾಭಾರತಿವಾರ್ತಾಭಾರತಿ27 Sept 2023 8:25 PM IST
share
ಕ್ಯಾಂಪ್ಕೊ ಸಂಸ್ಥೆಗೆ 22 ಕೋಟಿ ರೂ. ಲಾಭ: ಕಿಶೋರ್ ಕುಮಾರ್ ಕೊಡ್ಗಿ

ಮಂಗಳೂರು: ಕಳೆದ ಸಾಲಿನಲ್ಲಿ ಭಾರಿ ಮಳೆ , ಮುಕ್ತ ಆಮದು ನೀತಿ, ಚಾಲಿ ಅಡಿಕೆ ಗುಣಮಟ್ಟ ಕೊರತೆ, ಉತ್ತರ ಭಾರತದಲ್ಲಿ ಅಡಿಕೆ ಬೇಡಿಕೆ ಕುಸಿತ ಹೀಗೆ ನಾನಾ ಸವಾಲುಗಳಿದ್ದರೂ ಇವೆಲ್ಲವನ್ನು ಯಶಸ್ವಿಯಾಗಿ ನಿಭಾಯಿಸಿರುವ ಕ್ಯಾಂಪ್ಕೊ ಸಂಸ್ಥೆ 2022-23ನೇ ಸಾಲಿನಲ್ಲಿ 22 ಕೋಟಿ. ರೂ ಲಾಭ ಗಳಿಸಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದರು.

ಮಂಗಳೂರಿನ ಸಂಘನಿಕೇತನದಲ್ಲಿ ಬುಧವಾರ ನಡೆದ ಕ್ಯಾಂಪ್ಕೋ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ವರ್ಷದ ಅಂತ್ಯದೊಳಗೆ 30 ಕೋಟಿ ರೂ ಲಾಭ ಗಳಿಸುವ ಗುರಿ ಇರಿಸಿಕೊಳ್ಳಲಾಗಿದೆ ಎಂದು ಹೇಳಿದರು.

ಬೈಲಾಕ್ಕೂ ತಿದ್ದುಪಡಿ: ಕ್ಯಾಂಪ್ಕೋ ತನ್ನ ಬೈಲಾದಲ್ಲಿ ತಿದ್ದುಪಡಿ ಮಾಡಲಾಗಿದ್ದು, ಅಡಕೆ, ಕೊಕ್ಕೊ , ರಬ್ಬರ್, ಗೇರು, ತೆಂಗಿನಕಾಯಿ ಜತೆಗೆ ಸಾಂಬಾರ, ಕಾಫಿ, ಔಷಧೀಯ ಉತ್ಪನ್ನ ಹಾಗೂ ತಾಳೆ ಬೆಳೆ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಹಳದಿ ಎಲೆ ರೋಗಕ್ಕೂ ಸಂಶೋಧನೆಗೆ ಅನುದಾನ ನೀಡಲಾಗುವುದು. ಆಡಳಿತ ಮಂಡಳಿಗೆ ನಿರ್ದೇಶಕರ ಸಂಖ್ಯೆಯನ್ನು 19ಕ್ಕೆ ಏರಿಕೆ ಮಾಡಲಾಗಿದೆ. ಇದರಲ್ಲಿ ಇಬ್ಬರು ಮಹಿಳಾ ನಿರ್ದೇಶಕರ ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದರು.

ಅಡಕೆ ಕೃಷಿಕರಿಗೆ ಮಣ್ಣಿನ ಫಲವತ್ತತೆ ಹಾಗೂ ಹೆಚ್ಚಿನ ಇಳುವರಿಗಾಗಿ ಕ್ಯಾಂಪ್ಕೋ ತನ್ನದೇ ಬ್ರ್ಯಾಂಡ್‌ನಲ್ಲಿ ತಯಾರಿಸಿರುವ ಕ್ಯಾಂಪ್ಕೊ ಆಯುಷ್ ಹಾಗೂಕ್ಯಾಂಪ್ಕೊ ಪೌಷ್ಠಿಕ್‌ನ್ನು ಅಡಕೆ ಟಾಸ್ಕ್‌ಪೊರ್ಸ್ ಸಮಿತಿ ಅಧ್ಯಕ್ಷ ಅರಗ ಜ್ಞಾನೇಂದ್ರ ಬಿಡುಗಡೆಗೊಳಿಸಿದರು. ಈ ವೇಳೆ ಮಾತನಾಡಿದ ಅವರು, ಅಡಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂಬ ಬಗ್ಗೆ ಸಂಶೋಧನಾ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ಶೀಘ್ರವೇ ಸಲ್ಲಿಸಲಾಗುವುದು ಎಂದರು.

ಇದೇ ಸಂದರ್ಭ ರಾಷ್ಟ್ರಪತಿಗಳಿಂದ ಸಸ್ಯತಳಿ ಸಂರಕ್ಷಕ ಪುರಸ್ಕಾರ ಪಡೆದ ಬಿ.ಕೆ.ದೇವರಾಯ ಹಾಗೂ ಕರಿಮೆಣಸು ಸಂಸ್ಕರಣಾ ಯಂತ್ರ ಆವಿಷ್ಕರಿಸಿದ ಗೋಪಾಲಕೃಷ್ಣ ಶರ್ಮ ಇವರಿಗೆ ಆರ್‌ಎಸ್‌ಎಸ್ ಮುಖಂಡ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರು ಕ್ಯಾಂಪ್ಕೋ ಸುವರ್ಣ ಮಹೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸುವರ್ಣ ಮಹೋತ್ಸವ ಸಲುವಾಗಿ ಹೊರತಂದ ಪೂಗಸಿರಿ ಸ್ಮರಣ ಸಂಚಿಕೆಯನ್ನು ಆರ್‌ಎಸ್‌ಎಸ್ ಮುಖಂಡ ಪ್ರಭಾಕರ ಭಟ್ ಕಲ್ಲಡ್ಕ ಬಿಡುಗಡೆಗೊಳಿಸಿದರು. ಉಪಾಧ್ಯಕ್ಷ ಶಂಕರನಾರಾಯಣ ಭಟ್ ಖಂಡಿಗ, ಎಸ್.ಆರ್.ಸತೀಶ್ಚಂದ್ರ, ದಯಾನಂದ್ ಹೆಗ್ಡೆ, ಕೃಷ್ಣ ಪ್ರಸಾದ್ ಮಡ್ತಿಲ, ಶಂಭುಲಿಂಗ ಜಿ.ಹೆಗಡೆ, ಕೆ.ಬಾಲಕೃಷ್ಣ ರೈ, ಜಯರಾಮ ಸರಳಾಯ, ಪದ್ಮರಾಜ್ ಪಟ್ಟಾಜೆ, ಮಹೇಶ್ ಚೌಟ, ರಾಘವೇಂದ್ರ ಭಟ್, ಜಯಪ್ರಕಾಶ್ ನಾರಾಯಣ್, ರಾಧಾಕೃಷ್ಣನ್, ಸತ್ಯ ನಾರಾಯಣ ಪ್ರಸಾದ್, ಸುರೇಶ್ ಕುಮಾರ್ ಶೆಟ್ಟಿ, ರಾಘವೇಂದ್ರ ಎಚ್.ಎಂ, ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಕುಮಾರ್, ಜನರಲ್ ಮೆನೇಜರ್ ರೇಷ್ಮಾ ಮಲ್ಯ, ಡಿಜಿಎಂ ಪರಮೇಶ್ವರ್, ಮಾರುಕಟ್ಟೆ ಮುಖ್ಯಸ್ಥ ಗೋವಿಂದ ಭಟ್, ಚಾಕಲೇಟ್ ಮಾರುಕಟ್ಟೆ ಮುಖ್ಯಸ್ಥ ಶ್ಯಾಮ ಪ್ರಸಾದ್, ಸಿಎಗಳಾದ ಪ್ರವೀಣ್ ಕುಮಾರ್, ಪ್ರಕಾಶ್, ಆರ್.ಡಿ.ಶಾಸ್ತ್ರಿ, ಚಂದ್ರಕಾಂತ್ ರಾವ್, ಲೆಕ್ಕ ಪರಿಶೋಧಕ ರಮೇಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X