ಗ್ರಾಮ ಆಡಳಿತಾಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರದಿಂದ ತೊಂದರೆ | ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ ತಹಶೀಲ್ದಾರ್ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ

ಬೆಳ್ತಂಗಡಿ : ಗ್ರಾಮ ಆಡಳಿತಾಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರದಿಂದ ಜನಸಾಮಾನ್ಯರಿಗೆ ಮತ್ತು ವಿಶೇಷವಾಗಿ ವಿದ್ಯಾರ್ಥಿಗಳಿಗೆ ದೊರಕಬೇಕಾದ ಸೇವೆಗಳು ಸ್ಥಗಿತಗೊಂಡಿದ್ದು, ಶೀಘ್ರವಾಗಿ ಪರಿಹರಿಸಬೇಕೆಂದು ಕೋರಿ ಬೆಳ್ತಂಗಡಿ ತಹಶೀಲ್ದಾರ್ ಮುಖಾಂತರ ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಗಳು ಮತ್ತು ಕಂದಾಯ ಸಚಿವರಿಗೆ SSF ಬೆಳ್ತಂಗಡಿ ಡಿವಿಷನ್ ವತಿಯಿಂದ ಮನವಿ ಸಲ್ಲಿಸಲಾಯಿತು.
ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ವಿಸ್ಡಂ ಕಾರ್ಯದರ್ಶಿ ರಶೀದ್ ಮಡಂತ್ಯಾರ್ ಬೆಳ್ತಂಗಡಿ ಡಿವಿಷನ್ ಅಧ್ಯಕ್ಷ ಇಸಾಕ್ ಅಳದಂಗಡಿ, ಉಪಾಧ್ಯಕ್ಷ ಲತೀಫ್ ಅಹ್ಸನಿ ಮಲೆಬೆಟ್ಟು ದ.ಕ ಈಸ್ಟ್ ಜಿಲ್ಲಾ ಕ್ಯೂಡಿ ಕಾರ್ಯದರ್ಶಿ ಮುಬೀನ್ ಉಜಿರೆ ಸದಸ್ಯರಾದ ಶಮೀರ್ ಲಾಯಿಲ ಉಪಸ್ಥಿತರಿದ್ದರು.
Next Story