ಆರ್ಯಾಪು ಗ್ರಾಪಂ ಉಪ ಚುನಾವಣೆ; ಪುತ್ತಿಲ ಪರಿವಾರದ ಸುಬ್ರಹ್ಮಣ್ಯ ಬಲ್ಯಾಯ ಗೆಲುವು, ಬಿಜೆಪಿಗೆ ಮುಖಭಂಗ
ಪುತ್ತೂರು: ಆರ್ಯಾಪು ಗ್ರಾಪಂ ಉಪ ಚುನಾವಣೆಯ ಪ್ರಕಟಗೊಂಡಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅರುಣ್ ಕುಮಾರ್ ಪುತ್ತಿಲ ಅವರ ಬೆಂಬಲಿಗ ಸುಬ್ರಹ್ಮಣ್ಯ ಬಲ್ಯಾಯ ಗೆಲುವು ದಾಖಲಿಸಿದ್ದಾರೆ.
ಸುಬ್ರಹ್ಮಣ್ಯ ಬಲ್ಯಾಯ ಒಟ್ಟು 499 ಮತಗಳನ್ನು ಪಡೆದುಕೊಂಡಿದ್ದಾರೆ. ಇಲ್ಲಿ ಕಾಂಗ್ರೆಸ್ ಎರಡನೇ ಸ್ಥಾನದಲ್ಲಿದ್ದು. ಈ ಹಿಂದೆ ಗೆಲುವು ಸಾಧಿಸಿದ್ದ ಬಿಜೆಪಿ ಮೂರನೇ ಸ್ಥಾನಕ್ಕೆ ಕುಸಿದಿದೆ.
ಪುತ್ತೂರಿನ ನಿಡ್ಪಳ್ಳಿ ಗ್ರಾಪಂ ಚುನಾವಣೆ ಫಲಿತಾಂಶವೂ ಪ್ರಕಟಗೊಂಡಿದ್ದು ಕಾಂಗ್ರೆಸ್ ನ ಸತೀಶ್ ಶೆಟ್ಟಿ 235 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.
ಇಲ್ಲೂ ಕೂಡಾ ಬಿಜೆಪಿ ಬೆಂಬಲಿತ ಅಭ್ಯರ್ಥಿ ಮೂರನೇ ಸ್ಥಾನಕ್ಕೆ ಇಳಿದಿದ್ದು, ಪುತ್ತಿಲ ಪರಿವಾರದ ಅಭ್ಯರ್ಥಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಪುತ್ತೂರಿನ ಎರಡೂ ಕಡೆ ಬಿಜೆಪಿ ಮೂರನೇ ಸ್ಥಾನಕ್ಕೆ ಕುಸಿದಿದೆ.
Next Story