ಬೆಳ್ತಂಗಡಿ: ವಿವಾಹಿತ ಮಹಿಳೆ ಆತ್ಮಹತ್ಯೆ
ಬೆಳ್ತಂಗಡಿ: ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬಳೆಂಜದಲ್ಲಿ ಸಂಭವಿಸಿದೆ.
ಮೃತ ಮಹಿಳೆಯನ್ನು ಬೆಳ್ತಂಗಡಿಯಲ್ಲಿ ಉದ್ಯಮಿಯಾಗಿರುವ ಆಲ್ವಿನ್ ಎಂಬವರ ಪತ್ನಿ ಸಿಂಥಿಯಾ(40) ಎಂದು ಗುರುತಿಸಲಾಗಿದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಘಟನೆಯ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ.
Next Story