ಬೆಳ್ತಂಗಡಿ: ಆತ್ಮಹತ್ಯೆಗೆ ಯತ್ನಿಸಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿ ಮೃತ್ಯು
ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟಿದ್ದಾಳೆ.
ಮೃತ ವಿದ್ಯಾರ್ಥಿನಿಯನ್ನು ಧರ್ಮಸ್ಥಳ ಗ್ರಾಮದ ಪಿಜತ್ತಡ್ಕದ ನಿವಾಸಿ ಕಿಶೋರ್-ಸೌಮ್ಯಾ ದಂಪತಿ ಪುತ್ರಿ ತ್ರಿಶಾ(16) ಎಂದು ಗುರುತಿಸಲಾಗಿದೆ.
ಫೆ.7ರಂದು ಈಕೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಳು ಎನ್ನಲಾಗಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ತ್ರಿಶಾ ಸೋಮವಾರ ಮುಂಜಾನೆ ಮೃತ ಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ
Next Story