Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ: ವಿದ್ಯಾರ್ಥಿಗೆ ಹಲ್ಲೆ‌...

ಬೆಳ್ತಂಗಡಿ: ವಿದ್ಯಾರ್ಥಿಗೆ ಹಲ್ಲೆ‌ ಆರೋಪ; ಎಸ್.ಡಿ.ಎಂ.ಸಿ‌ ಅಧ್ಯಕ್ಷ, ಇಬ್ಬರು ಶಿಕ್ಷಕರ‌ ವಿರುದ್ಧ ಪ್ರಕರಣ‌ ದಾಖಲು

ವಾರ್ತಾಭಾರತಿವಾರ್ತಾಭಾರತಿ1 Dec 2023 7:05 PM IST
share
ಬೆಳ್ತಂಗಡಿ: ವಿದ್ಯಾರ್ಥಿಗೆ ಹಲ್ಲೆ‌ ಆರೋಪ; ಎಸ್.ಡಿ.ಎಂ.ಸಿ‌ ಅಧ್ಯಕ್ಷ, ಇಬ್ಬರು ಶಿಕ್ಷಕರ‌ ವಿರುದ್ಧ ಪ್ರಕರಣ‌ ದಾಖಲು

ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗೆ ಎಸ್.ಡಿ.ಎಂ.ಸಿ‌ ಅಧ್ಯಕ್ಷ ಹಲ್ಲೆ‌ ನಡೆಸಿದ ಘಟನೆ‌ ಬಳ್ಳಮಂಜ ಮಚ್ಚಿನದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದ್ದು, ಎಸ್.ಡಿ. ಎಂ.ಸಿ ಅಧ್ಯಕ್ಷ ಹಾಗೂ‌ ಇಬ್ಬರು ಶಿಕ್ಷಕರ‌ ವಿರುದ್ಧ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.

ಎಸ್.ಡಿ.ಎಂ.ಸಿ ಸಮಿತಿ ಅಧ್ಯಕ್ಷ ಪರಮೇಶ್ ಹಾಗೂ ಶಾಲೆಯ ಮುಖ್ಯ ಶಿಕ್ಷಕಿ ಪ್ರಮೀಳಾ ಹಾಗೂ ಶಿಕ್ಷಕ ರಮೇಶ್ ವಿರುದ್ಧ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

8ನೇ ತರಗತಿಯ ವಿದ್ಯಾರ್ಥಿ ಮಹಮ್ಮದ್ ತಫ್ಸೀರ್ ಹಲ್ಲೆಗೆ ಒಳಗಾದ ಬಾಲಕ. ಎಸ್.ಡಿ.ಎಂ.ಸಿ‌ ಅಧ್ಯಕ್ಷ ಪರಮೇಶ್ ಹಲ್ಲೆ ಮಾಡಿದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿ ತಫ್ಸೀರ್ ತನ್ಮ ಸೈಕಲ್ ಅನ್ನು ಇನ್ನೊಬ್ಬ ವಿದ್ಯಾರ್ಥಿಗೆ ಮಾರಾಟ ಮಾಡಿದ್ದ ಎನ್ನಲಾಗಿದ್ದು, ಈ ವಿಚಾರವಾಗಿ ನ.28ರಂದು ಬಾಲಕನನ್ನು ಶಿಕ್ಷಕರ ಕೊಠಡಿಗೆ ಕರೆಸಿದ ಆರೋಪಿ ಪರಮೇಶ್ ವಿದ್ಯಾರ್ಥಿಯ ತಾಯಿಯ ಎದುರಲ್ಲಿಯೇ ಆತನ ಮೇಲೆ ಕೋಲಿನಿಂದ ಹಾಗೂ ಕೈಯಿಂದ ಹಲ್ಲೆ ನಡೆಸಿದ್ದಾನೆ, ಬಾಲಕನ ಎದೆಗೂ ಗುದ್ದಿದ್ದಾನೆ ಎನ್ನಲಾಗಿದ್ದು ಕೋಲಿನಿಂದ ನಡೆಸಿದ ಹಲ್ಲೆಯಿಂದ‌ ಬಾಲಕನ ಕಾಲಿನಲ್ಲಿ ಗಾಯವಾಗಿದೆ. ಹಲ್ಲೆ ನಡೆಸಿದ ಬಳಿಕ ಇದನ್ನು ಯಾರಿಗೂ ಹೇಳುವುದು ಬೇಡ ಹೇಳಿದರೆ ಸೈಕಲ್ ಕಳ್ಳತನ ಮಾಡಿರುವುದಾಗಿ ಕೇಸ್ ಮಾಡಿಸುತ್ತೇನೆ ಎಂದು ಬೆದರಿಕೆಯನ್ನೂ ಪರಮೇಶ್ ಹಾಕಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.

ನ. 30ರಂದು ಬಾಲಕನಿಗೆ ಎದೆನೋವು ಕಾಣಿಸಿಕೊಂಡಿದ್ದು, ಈ ವೇಳೆ ಬಾಲಕನ ತಾಯಿ ಹಲ್ಲೆ ಮಾಡಿರುವ ಬಗ್ಗೆ ಸಂಬಂಧಿಕರಿಗೆ ಹೇಳಿದ್ದು, ಆಗಲೇ ಹಲ್ಲೆ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು‌, ಘಟನೆಯ ಬಗ್ಗೆ ಪೂಂಜಾಲಕಟ್ಟೆ ಪೊಲೀಸರಿಗೆ ದೂರು ನೀಡಲಾಗಿದೆ.

ಇದೀಗ ದೂರಿನಂತೆ ಎಸ್.ಡಿ.ಎಂ.ಸಿ ಸಮಿತಿ ಅಧ್ಯಕ್ಷ ಪರಮೇಶ್ ಹಾಗೂ ಶಾಲೆಯ ಮುಖ್ಯ ಶಿಕ್ಷಕಿ ಪ್ರಮೀಳಾ ಹಾಗೂ ಶಿಕ್ಷಕ ರಮೇಶ್ ವಿರುದ್ಧ ಪೂಂಜಾಲಕಟ್ಟೆ ಠಾಣೆಯಲ್ಲಿ ಕಲಂ 323, 324,506,114 ಹಾಗೂ ಬಾಲನ್ಯಾಯ ಕಾಯಿದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಘಟನೆಯ ಬಗ್ಗೆ ಮಾಹಿತಿ ತಿಳಿದು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಬಾಲಕನಿಂದ ಮಾಹಿತಿ ಪಡೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X