Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗೇರು ಬೀಜ ಖರೀದಿಗೆ ಕ್ಯಾಂಪ್ಕೊ ಚಿಂತನೆ:...

ಗೇರು ಬೀಜ ಖರೀದಿಗೆ ಕ್ಯಾಂಪ್ಕೊ ಚಿಂತನೆ: ಕಿಶೋರ್ ಕುಮಾರ್ ಕೂಡ್ಗಿ

ಕ್ಯಾಂಪ್ಕೊದ 50ನೇ ವಾರ್ಷಿಕ ಮಹಾಸಭೆ

ವಾರ್ತಾಭಾರತಿವಾರ್ತಾಭಾರತಿ31 Aug 2024 8:22 PM IST
share
ಗೇರು ಬೀಜ ಖರೀದಿಗೆ ಕ್ಯಾಂಪ್ಕೊ ಚಿಂತನೆ: ಕಿಶೋರ್ ಕುಮಾರ್ ಕೂಡ್ಗಿ

ಮಂಗಳೂರು: ಅಡಕೆ ಬೆಳೆಗಾರರ ಹೆಮ್ಮೆಯ ಸಹಕಾರಿ ಸಂಸ್ಥೆಯಾಗಿರುವ ಕ್ಯಾಂಪ್ಕೊ ಗೇರು ಬೀಜ ಖರೀದಿ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆಸುತ್ತಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ. ಮಂಗಳೂರು ಹೊರವಲಯದ ಅಡ್ಯಾರು ಗಾರ್ಡನ್ನಲ್ಲಿ ಶನಿವಾರ ನಡೆದ ಕ್ಯಾಂಪ್ಕೋ(ಕೇಂದ್ರ ಅಡಕೆ ಮತ್ತು ಕೋಕೋ ಮಾರಾಟ ಮತ್ತು ಪರಿಷ್ಕರಣ ಸಹಕಾರಿ ನಿಯಮಿತ) ಇದರ 50ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಡಿಕೆ, ಕಾಳುಮೆಣಸು, ಕೊಕ್ಕೊ ಖರೀದಿಸುತ್ತಿರುವ ಕ್ಯಾಂಪ್ಕೊ ಸಂಸ್ಥೆ ಸದಸ್ಯರಿಗೆ ಉತ್ತಮ ದರವನ್ನು ದೊರಕಿಸಿಕೊಡು ವುದಕ್ಕಾಗಿ ಮುಂದೆ ಗೇರು ಬೀಜ ಖರಿಸುವ ಬಗ್ಗೆ ಯೋಚಿಸುತ್ತಿದೆ. ಈ ಬಗ್ಗೆ ಆಡಳಿತ ಮಂಡಳಿಯ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಪೂರ್ಣ ಪ್ರಮಾಣದಲ್ಲಿ ತೆಂಗು ಖರೀದಿಗೆ ಕ್ಯಾಂಪ್ಕೊ ಸಂಸ್ಥೆ ಮುಂದಾಗುವಂತೆ ಸದಸ್ಯರು ಮಹಾಸಭೆಯಲ್ಲಿ ಒತ್ತಾಯಿಸಿದರು.

ಈಗಾಗಲೇ ಕ್ಯಾಂಪ್ಕೊ ಬ್ರ್ಯಾಂಡ್‌ನಲ್ಲಿ ಪರಿಶುದ್ಧ ತೆಂಗಿನ ಎಣ್ಣೆ ಮಾರುಕಟ್ಟೆಗೆ ಪರಿಚಯಿಸಿದೆ. ಹೀಗಾಗಿ ಸದಸ್ಯರಿಂದ ತೆಂಗಿನಕಾಯಿ ಖರೀದಿಸುವ ಬಗ್ಗೆಯೂ ಕ್ಯಾಂಪ್ಕೊ ಆಸಕ್ತಿ ವಹಿಸಬೇಕು ಎಂದು ಆಗ್ರಹಿಸಿದರು.

5.99 ಕೋಟಿ ರೂ.ಲಾಭ:ಕಳೆದ ಸಾಲಿನಲ್ಲಿ ಕ್ಯಾಂಪ್ಕೊ 3,336.87 ಕೋಟಿ ರು. ಸಾರ್ವಕಾಲಿಕ ದಾಖಲೆಯ ವಹಿವಾಟು ನಡೆಸಿ 5.99 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ ಎಂದು ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಪ್ರಕಟಿಸಿದರು.

ವಿದೇಶಿ ಅಡಿಕೆಯ ಅಕ್ರಮ ಆಮದಿನಿಂದ ದೇಶಿ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮೇಲೆ ಪ್ರಭಾವ ಬೀರಿದರೂ ಪರಿಣಾಮ ಕಾರಿ ಕಾರ್ಯತಂತ್ರಗಳ ಮೂಲಕ ತೆಗೆದುಕೊಂಡ ತೀರ್ಮಾನದಿಂದ ಅಂತಿಮ ತ್ರೈಮಾಸಿಕ ಅವಧಿಯಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದರು.

*ಮಾರುಕಟ್ಟೆಯಲ್ಲಿ ಹಿಡಿತ ಸಡಿಲಗೊಂಡಿಲ್ಲ: ಅಡಿಕೆ ಮಾರುಕಟ್ಟೆ ಈಗಲೂ ಕ್ಯಾಂಪ್ಕೊದ ಹಿಡಿತದಲ್ಲೇ ಇದೆ. ಈಗ ಮಾರುಕಟ್ಟೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಧಾರಣೆಯಲ್ಲಿ ಏರಿಳಿತ ಇದೆ. ಕಳೆದ ಬಾರಿ ಕಾಳುಮೆಣಸು ಧಾರಣೆ ಕುಸಿತದಿಂದ ಸಂಸ್ಥೆಗೆ ನಷ್ಟ ಉಂಟಾಗಿತ್ತು. ಈ ಬಾರಿ ಧಾರಣೆ ಏರಿಕೆಯಿಂದ ಲಾಭದ ನಿರೀಕ್ಷೆ ಇದೆ

*ವಿಶ್ವ ಆರೋಗ್ಯ ಸಂಸ್ಥೆಗೆ ಮನವಿ:ಅಡಿಕೆಯನ್ನು ಹಾನಿಕಾರ ಪಟ್ಟಿಯಿಂದ ತೆಗೆದುಹಾಕಲು ವಿಶ್ವ ಆರೋಗ್ಯ ಸಂಸ್ಥೆ (ಡಬ್‌ಯಒ)ಗೆ ವೈಜ್ಞಾನಿಕ ಸಂಶೋಧನಾ ವರದಿ ಸಲ್ಲಿಸಿ ಮನವರಿಕೆ ಮಾಡುವ ಪ್ರಯತ್ನವನ್ನು ಕ್ಯಾಂಪ್ಕೊ ಮುಂದಿನ ತಿಂಗಳು ಮಾಡಲಿದೆ. ಈ ಮೂಲಕ ಕ್ಯಾನ್ಸರ್ ಪಟ್ಟಿಯಿಂದ ಅಡಿಕೆಯನ್ನು ತೆಗೆದುಹಾಕಲು ಪ್ರಯತ್ನಿಸಲಾಗುವುದು ಎಂದು ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಸಭೆಗೆ ಮಾಹಿತಿ ನೀಡಿದರು.

ಉತ್ತರ ಭಾರತದಲ್ಲಿ ನಮ್ಮ ಅಡಿಕೆ ಜೊತೆಗೆ ಕಲಬೆರಕೆಯ ಕೆಂಪಡಕೆಯನ್ನು ಮಿಶ್ರಣ ಮಾಡಿ ಗುಣಮಟ್ಟರಹಿತ ಅಡಿಕೆ ಮಾರಾಟವಾಗುತ್ತಿದೆ. ಇದನ್ನು ತಡೆಯುವುದಲ್ಲದೆ, ಇಂತಹ ಅಡಕೆ ಕಂಡುಬಂದರೆ ಅದನ್ನು ನಾಶಪಡಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ ಎಂದರು.

*ಕೇರಳ ಸರಕಾರಕ್ಕೆ ಮನವಿ: ಕಳೆದ ಬಾರಿ ಬಿಡುಗಡೆಗೊಳಿಸಿದ ಕ್ಯಾಂಪ್ಕೊ ಬ್ರ್ಯಾಂಡ್‌ನ ರಸಗೊಬ್ಬರವನ್ನು ಕೇರಳದಲ್ಲೂ

ಮಾರಾಟ ಮಾಡುವ ಬಗ್ಗೆ ಅಲ್ಲಿನ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಕ್ಯಾಂಪ್ಕೊ ಸದಸ್ಯ ಗ್ರಾಹಕರ ಅನುಕೂಲಕ್ಕೆ ಕೃಷಿ ಮಾರುಕಟ್ಟೆಯ ಆಗುಹೋಗುಗಳನ್ನು ಸುಲಭವಾಗಿ ತಲುಪಿಸಲು ಪ್ರತ್ಯೇಕ ಆ್ಯಪ್ ರೂಪಿಸಲು ನಿರ್ಧರಿಸಲಾಗಿದೆ. ಇದರಿಂದ ಕ್ಯಾಂಪ್ಕೊ ಅಡಿಕೆ ಹಾಗೂ ಇತರೆ ಉತ್ಪನ್ನಗಳ ಧಾರಣೆ ಸಹಿತ ಎಲ್ಲ ಮಾಹಿತಿಯೂ ಆ್ಯಪ್‌ನಲ್ಲಿ ದೊರೆಯಲಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಉಪಾಧ್ಯಕ್ಷ ಶಂಕರನಾರಾಯಣ ಭಟ್ ಖಂಡಿಗೆ, ನಿರ್ದೇಶಕರಾದ ಎಸ್.ಆರ್.ಸತೀಶ್ಚಂದ್ರ, ದಯಾನಂದ ಹೆಗ್ಡೆ, ಕೃಷ್ಣಪ್ರಸಾದ್ ಮಡ್ತಿಲ, ಶಂಭುಲಿಂಗ ಜಿ.ಹೆಗ್ಡೆ, ಕೆ.ಬಾಲಕೃಷ್ಣ ರೈ, ಜಯರಾಮ ಸರಳಾಯ, ಪದ್ಮರಾಜ ಪಟ್ಟಾಜೆ, ಎಂ.ಮಹೇಶ್ ಚೌಟ, ರಾಘವೇಂದ್ರ ಭಟ್ ಪಿ., ಜಯಪ್ರಕಾಶ್ ನಾರಾಯಣ ಟಿ.ಕೆ, ರಾಧಾಕೃಷ್ಣನ್, ಸತ್ಯನಾರಾಯಣ ಪ್ರಸಾದ್, ಸುರೇಶ್ ಕುಮಾರ್ ಶೆಟ್ಟಿ, ರಾಘವೇಂದ್ರ ಎಚ್.ಎಂ, ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ವಿ.ಸತ್ಯನಾರಾಯಣ ಉಪಸ್ಥಿತರಿದ್ದರು.

ಮುಂದಿನ ಯೋಜನೆಗಳು

*ಸಂಸ್ಕರಿತ ಕಾಳುಮೆಣಸನ್ನು ಕ್ಯಾಂಪ್ಕೊ ಬ್ರ್ಯಾಂಡ್‌ನಲ್ಲಿ ಉತ್ತರ ಭಾರತ ಮಾರುಕಟ್ಟೆಗೆ ಪರಿಚಯಿಸಲಾಗುವುದು.

* ಕ್ಯಾಂಪ್ಕೊದ ಹೊಸ ಸ್ವಾದಭರಿತ ಚಾಕಲೇಟ್ ಉತ್ಪನ್ನ, ಹೊಸ ಬಗೆಯ ತೆಂಗಿನ ಎಣ್ಣೆ ಶೀಘ್ರವೇ ಮಾರುಕಟ್ಟೆಗೆ

*ಪುತ್ತೂರಿನ ಕ್ಯಾಂಪ್ಕೊ ಚಾಕಲೇಟ್ ಫ್ಯಾಕ್ಟರಿಯಲ್ಲಿ ಅತ್ಯಾಧುನಿಕ ಯಂತ್ರೋಪಕರಣ ಅಳವಡಿಕೆ.

*ಕ್ಯಾಂಪ್ಕೊ ವಿಟ್ಲ ಶಾಖೆಗೆ ಹೊಸದಾಗಿ ಕಟ್ಟಡ ನಿರ್ಮಿಸುವ ಯೋಜನೆ

*ಕ್ಯಾಂಪ್ಕೊ ಸುಪರ್ದಿಯಲ್ಲಿ ಪುತ್ತೂರಿನ ಕಾವು ಎಚ್‌ಪಿಸಿಎಲ್ ವತಿಯಿಂದ ಹೊಸ ಪೆಟ್ರೋಲ್ ಬಂಕ್.

*ತುಮಕೂರು ಸೇರಿದಂತೆ ಬಯಲು ಸೀಮೆಗೆ ಕ್ಯಾಂಪ್ಕೊ ವಿಸ್ತರಣೆ ಬೇಡಿಕೆಯ ಬಗ್ಗೆ ಪರಿಶೀಲನೆ



share
ವಾರ್ತಾಭಾರತಿ
ವಾರ್ತಾಭಾರತಿ
Next Story
X