ಚಿಕ್ಕಮಗಳೂರು: ಬೈಕ್‌ಗೆ ಕಾರು ಢಿಕ್ಕಿ; ಬೆಳ್ತಂಗಡಿಯ ಯುವಕ ಮೃತ್ಯು
ಬೆಳ್ತಂಗಡಿ: ಬೈಕಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಗುರುವಾರ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಕುಂದಲಿಕೆ ನಿವಾಸಿ ಶಾಜಿ ಎಂಬವರ ಪುತ್ರ ಸಜೇಶ್ (26) ಮೃತ ಯುವಕ. ಎನ್.ಆರ್ ಪುರ ಬಳಿ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಕೆಲಸಕ್ಕೆ ಇವರು ತೆರಳಿದ್ದರು ಎನ್ನಲಾಗಿದೆ.
ಗುರುವಾರ ಮಧ್ಯಾಹ್ಮ ಊಟಕ್ಕೆ ತೆರಳುತಿದ್ದ ವೇಳೆ ಎದುರಿನಿಂದ ಬಂದ ಕಾರು ಬೈಕಿಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
Next Story