ಧರ್ಮಸ್ಥಳ: ಸೌಜನ್ಯಳ ತಂದೆ ಚಂದಪ್ಪ ಗೌಡ ನಿಧನ

ಸೌಜನ್ಯ - ಚಂದಪ್ಪ ಗೌಡ
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಕೊಲೆ ಹಾಗೂ ಅತ್ಯಾಚಾರ ಪ್ರಕರಣದ ಸಂತ್ರಸ್ಥೆ ಸೌಜನ್ಯಳ ತಂದೆ ಚಂದಪ್ಪ ಗೌಡ (58) ಅವರು ಅಲ್ಪಕಾಲದ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.
ಚಂದಪ್ಪ ಗೌಡ ಅವರು ಹಲವಾರು ವರ್ಷಗಳಿಂದ ಬೆಳ್ತಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದರು. ಅವರು ಕಳೆದ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತಿದ್ದರು ಎನ್ನಲಾಗಿದೆ. ಎರಡು ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು. ಅದರೆ ಇಂದು ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ತಂದೆ, ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಅಗಲಿದ್ದಾರೆ.
Next Story