Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಡವರಿಗೂ ಅತ್ಯುತ್ತಮ ಆರೋಗ್ಯ ಸೇವೆ...

ಬಡವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಸರಕಾರದ ಗುರಿ: ಸಿದ್ದರಾಮಯ್ಯ

ಮಂಗಳೂರಿನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಶಂಕು ಸ್ಥಾಪನೆ ನೆರವೇರಿಸಿದ ಸಿಎಂ

ವಾರ್ತಾಭಾರತಿವಾರ್ತಾಭಾರತಿ17 Jan 2025 2:45 PM IST
share
ಬಡವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಸರಕಾರದ ಗುರಿ: ಸಿದ್ದರಾಮಯ್ಯ

ಮಂಗಳೂರು, ಜ17: ಬಡವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸುವುದು ಸರಕಾರದ ಗುರಿಯಾಗಿದೆ. ಸರಕಾರದ ಎಲ್ಲಾ ಸಂಸ್ಥೆಗಳು ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಬೇಕಾಗಿರುವುದು ಅಂತಿಮ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಶುಕ್ರವಾರ ನಗರದ ಮೇರಿ ಹಿಲ್ ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ ಕಚೇರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡುತ್ತಿದ್ದರು.

ಸರಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಮಾದರಿಯಲ್ಲಿ ಶುಚಿತ್ವ ಮತ್ತು ನಿರ್ವಹಣೆ ಕಾಪಾಡುವ ಜೊತೆಗೆ ಗುಣಮಟ್ಟದ ಚಿಕಿತ್ಸಾ ಸೌಲಭ್ಯ ಸಿಗುವಂತಾಗಬೇಕು. ಶ್ರೀಮಂತರು ಮತ್ತು ನಮ್ಮಂಥ ರಾಜಕಾರಣಿಗಳೂ ಸರ್ಕಾರಿ ಆಸ್ಪತ್ರೆಗೆ ಬರುವಂಥಾಗಬೇಕು ಎನ್ನುವ ದಿಕ್ಕಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ ಎಂದರು.

ಕಳೆದ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜೀವ್ ಗಾಂಧಿ ವಿವಿ ಏಷ್ಯಾದ ಅತ್ಯಂತ ದೊಡ್ಡ ಆರೋಗ್ಯ ವಿಶ್ವವಿದ್ಯಾನಿಲಯ ಆಗಿದೆ. 3.5 ಲಕ್ಷ ವೈದ್ಯ ವಿದ್ಯಾರ್ಥಿಗಳಿರುವ ಅತ್ಯಂತ ದೊಡ್ಡ ಆರೋಗ್ಯ ವಿವಿ ಇದಾಗಿದೆ. ಆದ್ದರಿಂದ ಗುಣಮಟ್ಟದ ವೈದ್ಯರನ್ನು ರೂಪಿಸುವುದರ ಜೊತೆಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಲ್ಲಿ ರಾಜೀವ್ ಗಾಂಧಿ ವಿವಿಯ ಕೊಡುಗೆ ಅಪಾರ ಎಂದರು.

ರಾಜೀವ್ ಗಾಂಧಿ ಆರೋಗ್ಯ ವಿವಿಯು ಆರೋಗ್ಯ ಸೇವೆ ಸರಳವಾಗಿ ಜನರಿಗೆ ಸಿಗುವ ದಿಕ್ಕಿನಲ್ಲಿ ಸಂಶೋಧನೆಗಳನ್ನು ಹೆಚ್ಚೆಚ್ಚು ನಡೆಸಬೇಕು. ದೇಶದ ಅತ್ಯುತ್ತಮ ಆರೋಗ್ಯ ಸೇವೆ ಬಡವರಿಗೂ ಸುಲಭವಾಗಿ ಸಿಗುವಂತೆ ಮಾಡಬೇಕು ಎಂದು ಸಿದ್ದರಾಮಯ್ಯ ನೀಡಿದರು.

ಈ ಕ್ಷೇತ್ರದ ಡಿಪ್ಲೊಮಾ ಮತ್ತು ಇತರೆ ಕೋರ್ಸ್ ಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಲಾಗುತ್ತಿದೆ. ವೈದ್ಯ ವಿಜ್ಞಾನ ಪದವೀಧರರೂ ಯುವನಿಧಿಗೆ ಅರ್ಹತೆ ಗಳಿಸಿದ್ದಾರೆ. ವೈದ್ಯ ವಿದ್ಯಾರ್ಥಿಗಳು ಇತರ ಕ್ಷೇತ್ರಗಳಿಗೆ ವಲಸೆ ಹೋಗದೆ ಆರೋಗ್ಯ ಕ್ಷೇತ್ರದಲ್ಲೇ ತಮ್ಮ ಸೇವೆ ಸಲ್ಲಿಸಬೇಕು ಎಂದು ಕರೆ ನೀಡಿದರು.

ಬಿಪಿಎಲ್ ಕಾರ್ಡ್ ಇದ್ದವರಿಗೆ ಉಚಿತ ಸೇವೆ

ಬಿಪಿಎಲ್ ಕಾರ್ಡ್ ಕಾರ್ಡ್ ಇದ್ದವರಿಗೆ ಎಲ್ಲಾ ರೀತಿಯ ಆರೋಗ್ಯ ಸೇವೆಯನ್ನು ಉಚಿತ ವಾಗಿ ನೀಡಿ ಎನ್ನುವ ಸೂಚನೆಯನ್ನು ವೈದ್ಯಕೀಯ ಕಾಲೇಜುಗಳಿಗೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಇಂದು ನಾನು ಶಂಕುಸ್ಥಾಪನೆ ನೆರವೇರಿಸಿರುವ ಪ್ರಾದೇಶಿಕ ಕಚೇರಿಯ ನಿರ್ಮಾಣ ಮತ್ತು ಕಾರ್ಯಕ್ಷಮತೆ ಎರಡೂ ಗುಣಮಟ್ಟದಲ್ಲಿ ಕೂಡಿರಲಿ ಎಂದು ಸಿಎಂ ಸೂಚಿಸಿದರು

ಸ್ವಾಗತಿಸಿ ಮಾತನಾಡಿದ ಆರ್ಜಿಯು ಎಚ್ಎಸ್ ನ ಕುಲಪತಿ ಡಾ.ಎಂ.ಕೆ.ರಮೇಶ್, ಈ ಪ್ರಾದೇಶಿಕ ಕೇಂದ್ರವು ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ್ದು, ವಿನೂತನ ಸಿಮ್ಯುಲೇಶನ್ ಲ್ಯಾಬ್, ಕ್ರೀಡಾ ಸಂಕೀರ್ಣ, ಸುಧಾರಿತ ಫಿಟ್ನೆಸ್ ಕೇಂದ್ರ, ಮನೋರಂಜನಾ ಸೌಲಭ್ಯ, ಹವಾನಿಯಂತ್ರಿತ ಸಭಾಂಗಣ, ಸುಧಾರಿತ ಸಂಶೋಧನಾ ಕೇಂದ್ರಗಳು, ಸೆಮಿನಾರ್ ಹಾಲ್ ನೊಂದಿಗೆ ನಿರ್ಮಾಣ ವಾಗಲಿದೆ ಎಂದು ತಿಳಿಸಿದ್ದಾರೆ.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ, ಇಲ್ಲಿ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ಕೇಂದ್ರದ ಪ್ರಾದೇಶಿಕ ಕೇಂದ್ರ ಆರಂಭಿಸಬೇಕೆನ್ನುವುದು ನನ್ನ ಬಹು ದಿನದ ಕನಸು, ಈ ದೇಶದ ಯುವ ಜನರು ಈ ದೇಶದ ಸಂಪ ತ್ತಾಗಬೇಕೆನ್ನುವುದು ನಮ್ಮ ಆಶಯ. ಈ ಕೇಂದ್ರ ರಾಜೀವ ಗಾಂಧಿ ಆರೋಗ್ಯ ವಿ.ವಿ.ಯ ಕೇಂದ್ರ ಮಾತ್ರವಲ್ಲ, ಕರಾವಳಿ ಜನತೆಯ ಹೆಮ್ಮೆಯ ಕೇಂದ್ರವಾಗಲಿ ಎಂದು ಶುಭ ಹಾರೈಸಿದರು.

ವೈದ್ಯಕೀಯ ಶಿಕ್ಷಣ ಸಚಿವ ಮತ್ತು ಆರ್ ಜಿಯು ಎಚ್ ಎಸ್ನ ಸಹ ಕುಲಪತಿ ಡಾ.ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್ ಮಾತನಾಡಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಅಧಿಕಾರ ವಿಕೇಂದ್ರೀಕರಣ ಮತ್ತು ಗುಣಮಟ್ಟದ ಶಿಕ್ಷಣ, ಕೌಶಲ್ಯ ನೀಡುವ ಗುರಿ ಇದೆ. ದೇಶದಲ್ಲಿ ಕರ್ನಾಟಕ ಮತ್ತು ತಮಿಳುನಾಡು ಅತ್ಯಂತ ಹೆಚ್ಚು ವೈದ್ಯಕೀಯ ಕಾಲೇಜು ಹೊಂದಿದೆ ಸರಕಾರ ಬಡವರಿಗೆ ಕನಿಷ್ಠ ದರದಲ್ಲಿ ಚಿಕಿತ್ಸೆ ನೀಡುವ ಗುರಿ ಹೊಂದಿದೆ. ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಗೆ ಎರಡು ಲಕ್ಷ ಸದಸ್ಯರು ನೋಂದಣಿಯಾಗಿದ್ದಾರೆ ಅವರ ಕೌಶಲ್ಯ ವೃದ್ಧಿಗೆ ಸಹಾಯವಾಗಲಿದೆ ಎಂದರು.

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದ ಬ್ರಿಜೇಶ್ ಚೌಟ, ಶಾಸಕರಾದ ಡಾ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಅಶೋಕ್ ಕುಮಾರ್ ರೈ, ಐವನ್ ಡಿಸೋಜ, ಡಾ.ಮಂಜುನಾಥ ಭಂಡಾರಿ, ಗೋವಿಂದರಾಜು, ಮನಪಾ ಮೇಯರ್ ಮನೋಜ್ ಕುಮಾರ್, ವೈದ್ಯಕೀಯ ಶಿಕ್ಷಣ ನಿರ್ದೇಶಕಿ ಡಾ.ಸುಜಾತಾ ರಾಥೋಡ್, ಸರಕಾರದ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮೊಹ್ಸಿನ್, ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕ ಡಾ.ತ್ರಿವೇಣಿ, ಆರ್ಜಿ ಯುಎಚ್ ಎಸ್ ಸೆನೆಟ್ ಸದಸ್ಯರಾದ, ಡಾ.ಶಿವಶ ರಣ್ ಶೆಟ್ಟಿ, ಪ್ರೊ.ವೈಶಾಲಿ ಶ್ರೀಜಿತ್, ಡಾ.ಸಲೀಮುಲ್ಲಾ, ಡಾ.ಚರಿಶ್ಮಾ ಡಿಸಿಲ್ವ ಡಾ.ಮುಹಮ್ಮದ್ ಸುಹೇಲ್ ಮೊದಲಾದವರು ಉಪಸ್ಥಿತರಿದ್ದರು.

ರಾಜ್ಯ ಅಲೈಡ್ ಮತ್ತು ಆರೋಗ್ಯ ರಕ್ಷಣಾ 'ಮಂಡಳಿಯ ಅಧ್ಯಕ್ಷ ಡಾ.ಯು.ಟಿ.ಇಫ್ತಿಕಾರ್ ಅಲಿ ವಂದಿಸಿದರು.

"ಜಿಲ್ಲೆಗೊಂದು ಸರಕಾರಿ ವೈದ್ಯಕೀಯ ಕಾಲೇಜು ಇರಬೇಕು ಎನ್ನುವುದು ನನ್ನ ಗುರಿ. ಮಂಗಳೂರಿನಲ್ಲಿ ಉತ್ತಮ ಆರೋಗ್ಯ ಸೇವೆ ಇದ್ದರೂ ದ.ಕ. ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜಿನ ಅಗತ್ಯ ಇದೆ. ಈ ದಿಕ್ಕಿನಲ್ಲೂ ಸರಕಾರ ಯೋಚಿಸಿ ಕ್ರಮ ಕೈಗೊಳ್ಳಲಿದೆ"

-ಸಿದ್ದರಾಮಯ್ಯ, ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X