ಜೋಕಟ್ಟೆ: ಬಸ್‌ನಿಂದ ಬಿದ್ದು ಮಹಿಳೆ ಮೃತ್ಯು
ಮಂಗಳೂರು, ಜ.15:ಬಸ್ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಬಸ್ ನಿಂದ ಬಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಜೋಕಟ್ಟೆ ಬಳಿ ನಡೆದಿದೆ.
ಮೃತ ಮಹಿಳೆಯನ್ನು ಈರಮ್ಮ (65) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಸುಮಾರು 10 ಗಂಟೆಗೆ ಈರಮ್ಮ ತನ್ನ ಮಗಳ ಜೊತೆ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಬಸ್ ಚಾಲಕ ಹಠಾತ್ ಬ್ರೇಕ್ ಹಾಕಿದಾಗ ನಿಯಂತ್ರಣ ಕಳಕೊಂಡು ರಸ್ತೆಗೆ ಬಿದ್ದ ಈರಮ್ಮ ಅವರ ಮೇಲೆ ಬಸ್ಸಿನ ಹಿಂಬದಿಯ ಟಯರ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಬಗ್ಗೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 08/2024 ರ ಅಡಿಯಲ್ಲಿ 304 ಎ, 279 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story