Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ವಲಸೆ ಕಾರ್ಮಿಕನನ್ನು ಥಳಿಸಿ...

ಮಂಗಳೂರು: ವಲಸೆ ಕಾರ್ಮಿಕನನ್ನು ಥಳಿಸಿ ಹತ್ಯೆ; ತನಿಖೆಗೆ ವಿಶೇಷ ತನಿಖಾ ತಂಡ ನೇಮಿಸಲು ಸಿಪಿಐಎಂ ಆಗ್ರಹ

"ಈ ರೀತಿಯ ಪ್ರಕರಣಗಳು ಕರಾವಳಿಯು ಅಪಾಯದ ಗಡಿದಾಟುತ್ತಿರುವುದರ ಸಂಕೇತ"

ವಾರ್ತಾಭಾರತಿವಾರ್ತಾಭಾರತಿ28 April 2025 1:15 PM IST
share
ಮಂಗಳೂರು: ವಲಸೆ ಕಾರ್ಮಿಕನನ್ನು ಥಳಿಸಿ ಹತ್ಯೆ; ತನಿಖೆಗೆ ವಿಶೇಷ ತನಿಖಾ ತಂಡ ನೇಮಿಸಲು ಸಿಪಿಐಎಂ ಆಗ್ರಹ

ಮಂಗಳೂರು: ನಗರದ ಹೊರವಲಯದ ಕುಡುಪು ಎಂಬಲ್ಲಿ ರವಿವಾರ ಸಂಜೆ (ಎಪ್ರಿಲ್ 27) ಕ್ರಿಕೆಟ್ ಆಡುತ್ತಿದ್ದ ಗುಂಪೊಂದು ಅಲ್ಲಿದ್ದ ವಲಸೆ ಕಾರ್ಮಿಕನೋರ್ವನನ್ನು ಥಳಿಸಿ ಹತ್ಯೆಗೈದಿರುವ ಕುರಿತು ಆತಂಕಕಾರಿ ಮಾಹಿತಿಗಳು ಹೊರಬೀಳುತ್ತಿವೆ. ಘಟನೆ ನಡೆದು ಒಂದು ದಿನ ಕಳೆದರೂ ಪೊಲೀಸ್ ಇಲಾಖೆ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ನೀಡುತ್ತಿಲ್ಲ. ಇದು ಹಲವು ಅನುಮಾನಗಳಿಗೆ ಕಾರಣವಾಗುತ್ತಿದೆ ಎಂದು ಸಿಪಿಐಎಂ ದ.ಕ ಜಿಲ್ಲಾ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.

ಗುಂಪು ಹಲ್ಲೆ, ಹತ್ಯೆಯಲ್ಲಿ ಭಾಗಿಯಾಗಿರುವ ರಾಜಕೀಯ ಹಿನ್ನಲೆಯ ಕೆಲವು ಪ್ರಭಾವಿಗಳನ್ನು ರಕ್ಷಿಸುವ, ಪ್ರಕರಣದ ತೀವ್ರತೆಯನ್ನು ತಗ್ಗಿಸುವ, ಪ್ರಕರಣವನ್ನು ದುರ್ಬಲಗೊಳಿಸುವ ಯತ್ನವೂ ಪ್ರಭಾವಿ ರಾಜಕಾರಣಿಗಳಿಂದ, ಸ್ಥಳೀಯ ಜನಪ್ರತಿನಿಧಿಗಳಿಂದ ನಡೆಯುತ್ತಿರುವ ಕುರಿತು ಅನುಮಾನಗಳು ಸಾರ್ವಜನಿಕ ವಲಯದಿಂದ ವ್ಯಕ್ತವಾಗುತ್ತಿದೆ. ರಾಜ್ಯ ಸರಕಾರ ಈ ಕುರಿತು ಗಮನ ಹರಿಸಬೇಕು, ಖುದ್ದು ಮುಖ್ಯಮಂತ್ರಿಗಳು ಈ ಗುಂಪು ಹಲ್ಲೆ, ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉತ್ತಮ ಹಿನ್ನಲೆಯ ಅಧಿಕಾರಿಗಳ ತಂಡವನ್ನು ತನಿಖೆಗೆ ನೇಮಿಸಬೇಕು ಎಂದು ಆಗ್ರಹಿಸಿದೆ.

ಕುಡುಪು ಮೈದಾನದ ಸಮೀಪ ಬಂದ ವಲಸೆ ಕಾರ್ಮಿಕನನ್ನು ಆತನ ಧರ್ಮದ ಗುರುತಿನ ಕಾರಣಕ್ಕೆ ಕಲ್ಲು, ದೊಣ್ಣೆ, ಬ್ಯಾಟುಗಳಿಂದ ಅಲ್ಲಿದ್ದ ಗುಂಪು ಹಲ್ಲೆ ನಡೆಸಿ ಕೊಂದು ಹಾಕಿದೆ ಎಂದು ಎಲ್ಲೆಡೆ ಪುಕಾರು ಹಬ್ಬಿದೆ. ನತದೃಷ್ಟ ವಲಸೆ ಕಾರ್ಮಿಕ ದೇಶ ವಿರೋಧಿ ಘೋಷಣೆ ಕೂಗಿದ್ದಾನೆ ಎಂಬ ವದಂತಿಯನ್ನೂ ದುಷ್ಕರ್ಮಿಗಳ ಗುಂಪು ಹರಿಯಬಿಟ್ಟಿದೆ. ಆ ಮೂಲಕ ತಮ್ಮ ಗಂಭೀರ ದುಷ್ಕೃತ್ಯವನ್ನು ದೇಶ ಪ್ರೇಮದ ಲೇಬಲ್ ಅಂಟಿಸಿ ಸಮರ್ಥಿಸಿಕೊಳ್ಳುವ ಹೀನ ಯತ್ನವೂ ನಡೆಯುತ್ತಿದೆ. ಮಾಜಿ ಕಾರ್ಪೊರೇಟರ್ ಓರ್ವರ ಪತಿ ಈ ಗುಂಪನ್ನು ಹಲ್ಲೆ ನಡೆಸಲು ಪ್ರಚೋದಿಸಿದ್ದಾರೆ ಎಂಬ ಕುರಿತೂ ಸ್ಥಳೀಯರು ಮಾತಾಡಿಕೊಳ್ಳುತ್ತಿದ್ದಾರೆ. ಹತ್ಯೆಯ ತರುವಾಯ ಸ್ಥಳೀಯ ಜನಪ್ರತಿನಿಧಿಗಳೂ ಮಧ್ಯಪ್ರವೇಶಿಸಿ ಪ್ರಕರಣದ ತೀವ್ರತೆಯನ್ನು ತಗ್ಗಿಸುವ, ಕೆಲವರನ್ನು ಬಚಾವ್ ಮಾಡುವ ಯತ್ನ ನಡೆಸುತ್ತಿರುವ ಆರೋಪಗಳೂ ಕೇಳಿಬರುತ್ತಿವೆ. ಮಂಗಳೂರು ಪೊಲೀಸರು ಯಾವುದೇ ಅಧಿಕೃತ ಮಾಹಿತಿಯನ್ನು ಘಟನೆ ನಡೆದು ಒಂದು ದಿನ ಕಳೆದರೂ ನೀಡದಿರುವುದು ಪ್ರಕರಣದ ಕುರಿತು ಅನುಮಾನಗಳನ್ನು ಹೆಚ್ಚಿಸಿವೆ.

ಮಂಗಳೂರು ನಗರದಲ್ಲಿ ಈ ರೀತಿ ಗುಂಪು ಹಲ್ಲೆ, ಹತ್ಯೆ ನಡೆಯುವುದು ಕರಾವಳಿ ಜಿಲ್ಲೆಗಳು ಅಪಾಯದ ಗಡಿದಾಟುತ್ತಿರುವುದರ ಸಂಕೇತ, ಪೆಹಲ್ಗಾಮ್ ದುರಂತದ ಬೆನ್ನಲ್ಲೆ ಈ ಘಟನೆ ನಡೆದಿರುವುದು ಆಘಾತಕಾರಿ ವಿದ್ಯಾಮಾನ‌. ವಲಸೆ ಕಾರ್ಮಿಕರು, ಅವರ ಧರ್ಮದ ಹಾಗೂ ವಿವಿಧ ಗುರುತಿನ ಕಾರಣಕ್ಕೆ "ದೇಶಪ್ರೇಮ"ದ ಲೇಬಲ್ ಅಡಿ ದುಷ್ಕರ್ಮಿಗಳು ಬಹಿರಂಗವಾಗಿ ಹೊಡೆದು ಹಾಕುವುದು ಅನಾಗರಿಕತೆಯ ಪರಮಾವಧಿ. ಇದರ ಸಾಮಾಜಿಕ ಪರಿಣಾಮಗಳು ಸರಿಪಡಿಸಲಾಗಷ್ಟು ಗಂಭೀರವಾಗಿರುತ್ತದೆ. ಸಿಪಿಐಎಂ ದ.ಕ ಜಿಲ್ಲಾ ಸಮಿತಿ ಈ ಘಟನೆಯನ್ನು ಬಲವಾಗಿ ಖಂಡಿಸುತ್ತದೆ. ಪೊಲೀಸ್ ಇಲಾಖೆ ಘಟನೆಯ ಕುರಿತು ತಕ್ಷಣವೇ ಸಾರ್ವಜನಿಕರಿಗೆ ಪೂರ್ಣ ಮಾಹಿತಿಯನ್ನು ಒದಗಿಸಬೇಕು. ಪ್ರಕರಣದ ತನಿಖೆಗಾಗಿ ದಕ್ಷ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ನೇಮಿಸಬೇಕು ಎಂದು ಸಿಪಿಐಎಂ ದ.ಕ. ಜಿಲ್ಲಾ ಸಮಿತಿ ರಾಜ್ಯ ಸರಕಾರವನ್ನು ಆಗ್ರಹಿಸುತ್ತದೆ‌ ಎಂದು ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X