ಮಂಗಳೂರು| ಅಬಕಾರಿ ಅಧಿಕಾರಿಗಳಿಂದ ದಾಳಿ: ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ
File photo
ಮಂಗಳೂರು: ನಗರದ ಕಂಬಳ ಕ್ರಾಸ್, ಎಸ್.ಎಸ್. ಕಂಪೌಂಡ್ ಕಟ್ಟಡದ ಅಮಿತ್ ಎ.ಪಿ. ಎಂಬಾತನ ಮನೆಗೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಒಟ್ಟು ರೂ. 1,64,205 ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ.
ಪ್ರಕರಣದ ಆರೋಪಿ ಅಮಿತ್ ಎ.ಪಿ. ತಲೆಮರೆಸಿಕೊಂಡಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಂಗಳೂರು ವಿಭಾಗ ಜಾರಿ ಮತ್ತು ತನಿಖೆ ಅಬಕಾರಿ ಜಂಟಿ ಆಯುಕ್ತ ಡಾ. ಸಿ.ಎಚ್. ಬಾಲಕೃಷ್ಣ ಅವರ ನಿರ್ದೇಶನದಂತೆ ಅಬಕಾರಿ ಉಪ ಆಯುಕ್ತ ಟಿ.ಎಂ.ಶ್ರೀನಿವಾಸ್ ಮಾರ್ಗದರ್ಶದಲ್ಲಿ ದಾಳಿ ನಡೆಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಅಬಕಾರಿ ಇಲಾಖೆಯಿಂದ ಅಕ್ಟೋಬರ್ನಲ್ಲಿ ಒಟ್ಟು 8 ಪ್ರಕರಣಗಳನ್ನು ದಾಖಲಿಸಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ ಒಟ್ಟು ರೂ. 1,93,994 ಆಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನವಂಬರ್ನಲ್ಲಿ ಈವರೆಗೆ ಒಟ್ಟು 3 ಪ್ರಕರಣಗಳನ್ನು ದಾಖಲಿಸಲಾಗಿದ್ದು, ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ. 3,28,705 ಆಗಿದೆ ಎಂದು ಅಬಕಾರಿ ಉಪ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story