Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಪಾವನಿ ಸಿಲ್ಕ್ಸ್...

ಮಂಗಳೂರು: ಪಾವನಿ ಸಿಲ್ಕ್ಸ್ ಟೆಕ್ಸ್‌ಟೈಲ್ಸ್ ಶುಭಾರಂಭ

ಎ.21ರಿಂದ 30ರವರೆಗೆ 10% ರಿಯಾಯತಿ

ವಾರ್ತಾಭಾರತಿವಾರ್ತಾಭಾರತಿ21 April 2025 1:43 PM IST
share
ಮಂಗಳೂರು: ಪಾವನಿ ಸಿಲ್ಕ್ಸ್ ಟೆಕ್ಸ್‌ಟೈಲ್ಸ್ ಶುಭಾರಂಭ

ಮಂಗಳೂರು, ಎ.21: ನಗರದ ಭವಂತಿ ಸ್ಟ್ರೀಟ್‌ನ ಮಹಾಲಕ್ಷ್ಮೀ ಕಮರ್ಷಿಯಲ್ ಕಾಂಪ್ಲೆಕ್ಸ್‌ನಲ್ಲಿ ಪಾವನಿ ಸಿಲ್ಕ್ಸ್ ಮತ್ತು ಟೆಕ್ಸ್‌ಟೈಲ್ಸ್ ಸಂಸ್ಥೆಯ ಮಂಗಳೂರಿನ 2ನೇ ಮಳಿಗೆ ಸೋಮವಾರ ಶುಭಾರಂಭಗೊಂಡಿತು.

ದೈವಜ್ಞ ಕೆ.ಸಿ.ನಾಗೇಂದ್ರ ಭಾರದ್ವಾಜ್ ಉದ್ಘಾಟಿಸಿದರು. ಪುಟಾಣಿಗಳು ದೀಪ ಬೆಳಗಿಸಿದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ್ ಕಾಮತ್ ಅವರು, ಸ್ಪರ್ಧಾತ್ಮಕ ಯುಗದಲ್ಲಿ ವ್ಯಾಪಾರ ಸವಾಲು ಆಗಿದೆ. ಸರಕಾರದ ಹಲವು ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಬಟ್ಟೆ ವಿನ್ಯಾಸದಲ್ಲಿ ನಿರಂತರ ಬದಲಾವಣೆ ವ್ಯಾಪಾರಿಗಳಿಗೆ ಸವಾಲಾಗಿದೆ. ಕಠಿಣ ಪರಿಶ್ರಮ, ಗ್ರಾಹಕರಿಗೆ ಸಂತೃಪ್ತಿಯ ಸೇವೆ, ಉತ್ತಮ ಸಿಬ್ಬಂದಿಗಳ ಮೂಲಕ ವಾಪಾರದಲ್ಲಿ ಯಶಸ್ಸು ಸಾಧ್ಯ ಎಂದು ಹೇಳಿದ ಅವರು ಕರಾವಳಿಯಲ್ಲಿ ಪಾವನಿ ಇನ್ನೂ 10 ಶಾಖೆಗಳು ಉದಯಿಸಲಿ ಎಂದು ಹಾರೈಸಿದರು.

ದೈವಜ್ಞ ಕೆ.ಸಿ.ನಾಗೇಂದ್ರ ಭಾರದ್ವಾಜ್ ಶುಭ ಹಾರೈಸಿ, ಸಂಸ್ಥೆಯ ಪಾಲುದಾರರಾದ ಹೈದರ್ ಪಾವನಿ, ಗೌತಮ್ ಬಂಗೇರ, ಇಬ್ರಾಹಿಂ, ನರಸಿಂಹ, ನಾಗೇಶ್ ಅವರು ಪಾವನಿ ಸಂಸ್ಥೆಯನ್ನು ಕಟ್ಟಿ, ಒಗ್ಗಟ್ಟಿನಿಂದ ಈ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ ಎಂದರು.

ಬೋಳಾರ ಮುಹಿಯುದ್ದೀನ್ ಜುಮಾ ಮಸೀದಿ ಮುಸ್ಲಿಮ್ ಜಮಾಅತ್‌ನ ಖತೀಬ್ ಬಿ.ಕೆ.ಇಲ್ಯಾಸ್ ಬಾಖವಿ ಆಶೀರ್ವಚನ ನೀಡಿ‘ ಪಂಚಮಂ ಕಾರ್ಯ ಸಿದ್ಧಿ ಎಂಬಂತೆ ಐವರು ಸೌಹಾರ್ದತೆಯಿಂದ ಪಾವನಿ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ. ಜಾತಿ ಧರ್ಮಕ್ಕೆ ಕಚ್ಚಾಡುತ್ತಿರುವ ಪರಿಸ್ಥಿತಿಯಲ್ಲಿ ಈ ಐವರು ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದರು.

ವಕೀಲರಾದ ದಯಾನಂದ ರೈ ಅವರು ಮಾತನಾಡಿ, ‘ಸಂಸ್ಥೆಯ ಮಾಲಕರು ಉತ್ತಮ ಸಂಸ್ಕಾರವನ್ನು ಹೊಂದಿರುವರು. ಅವರ ಮೂಲಕ ಸಂಸ್ಥೆ ಅತ್ಯುತ್ತಮವಾಗಿ ಬೆಳೆಯುತ್ತದೆ ಎಂದು ಹೇಳಿದರು.

ವಕೀಲರಾದ ಅಬ್ದುಲ್ ಖಾದರ್ ಇಡ್ಯಾ ಮಾತನಾಡಿ, ‘ವ್ಯಾಪಾರ ಆರಂಭಿಸುವುದು ದೊಡ್ಡ ಸವಾಲು ಆಗಿದ್ದು, 18 ಇಲಾಖೆಗಳೊಂದಿಗೆ ವ್ಯವಹರಿಸಬೇಕಾಗುತ್ತದೆ ಎಂದರು.

ಐಸಿವೈಎಂ ನಿರ್ದೇಶಕ ರೆ. ಫಾ.ಅಶ್ವಿನ್ ಕಾರ್ಡೋಝ ಆಶೀರ್ವಚನ ನೀಡಿದರು.

ಕಟ್ಟಡದ ಮಾಲಕರಾದ ರವೀಂದ್ರ ನಿಕಂ, ಅರುಣ್ ನಿಕಂ, ದ.ಕ. ಟೆಕ್ಸ್‌ಟೈಲ್ಸ್ ಡೀಲರ್ಸ್ ಅಸೋಸಿಯೇಶನ್ ಅಧ್ಯಕ್ಷ ಯಶವಂತ್ ವಿ. ರಾವಲ್, ಬಾಲಣ್ಣ ತಮಿಳುನಾಡು, ಗುತ್ತಿಗೆದಾರರಾದ ಶರತ್ ಚಂದ್ರ, ಅನೂಪ್ ಬಂಗೇರ, ದೀಕ್ಷಿತ್ ರಾಜ್ ಅವರನ್ನು ಸನ್ಮಾನಿಸಲಾಯಿತು.

ಸಂಸ್ಥೆಯ ಪಾಲುದಾರರಾದ ಹೈದರ್ ಪಾವನಿ, ಗೌತಮ್ ಬಂಗೇರ, ಇಬ್ರಾಹೀಂ, ನರಸಿಂಹ, ನಾಗೇಶ್ ಅತಿಥಿಗಳನ್ನು ಸ್ವಾಗತಿಸಿದರು. ಚೇತನ್ ಪಿಲಿಕುಳ ಕಾರ್ಯಕ್ರಮ ನಿರ್ವಹಿಸಿದರು.

ಎ.21ರಿಂದ 30ರವರೆಗೆ ಶೇ 10ರಷ್ಟು ರಿಯಾಯತಿ:

ನೂತನ ಮಳಿಗೆಯಲ್ಲಿ ಮದುವೆ, ನಿಶ್ಚಿತಾರ್ಥ ಸೇರಿದಂತೆ ಶುಭ ಸಮಾರಂಭ ಹಾಗೂ ಇತರ ಎಲ್ಲಾ ಸಂದರ್ಭಗಳಿಗೆ ಪೂರಕವಾದ ಬಟ್ಟೆಬರೆಗಳ ಅಪೂರ್ವ ಸಂಗ್ರಹ ಲಭ್ಯ. ಸಂಸ್ಥೆಯ 10ನೇ ವಾರ್ಷಿಕೋತ್ಸವ ಮತ್ತು ಹೊಸ ಶಾಖೆಯ ಉದ್ಘಾಟನೆ ಪ್ರಯುಕ್ತ ಎ.21ರಿಂದ 30ರವರೆಗೆ ಎಲ್ಲಾ ಬಟ್ಟೆಗಳ ಮೇಲೆ ಶೇ.10ರಷ್ಟು ವಿಶೇಷ ರಿಯಾಯಿತಿ ಗ್ರಾಹಕರಿಗೆ ನೀಡಲಾಗುತ್ತಿದೆ ಎಂದು ಸಂಸ್ಥೆಯ ಮಾಲಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Delete Edit

share
ವಾರ್ತಾಭಾರತಿ
ವಾರ್ತಾಭಾರತಿ
Next Story
X