ಪುತ್ತೂರು: ಕಾರು ಢಿಕ್ಕಿ; ಯುಕೆಜಿ ವಿದ್ಯಾರ್ಥಿ ಮೃತ್ಯು
ಪುತ್ತೂರು : ಕಾರು ಢಿಕ್ಕಿಯಾಗಿ ಐದು ವರ್ಷ ಪ್ರಾಯದ ಬಾಲಕ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರಿನಲ್ಲಿ ಶನಿವಾರ ನಡೆದಿದೆ.
ಕೆಯ್ಯೂರು ಗ್ರಾಮದ ನಿವಾಸಿ ಹಾರಿಸ್ ದಾರಿಮಿ ಎಂಬವರ ಪುತ್ರ, ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ (5) ಮೃತಪಟ್ಟ ಬಾಲಕ.
ಮಹಮ್ಮದ್ ಆದಿಲ್ ಶನಿವಾರ ಮಧ್ಯಾಹ್ನದ ಹೊತ್ತಿಗೆ ನಡೆದುಕೊಂಡು ಹೋಗುತ್ತಿದ್ದಾಗ ಪುತ್ತೂರು ಕಡೆಗೆ ಹೋಗುತ್ತಿದ್ದ ಕಾರು ಬಾಲಕನಿಗೆ ಢಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರಿನ ಆಸ್ಪತ್ರೆಗೆ ಸೇರಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಬಾಲಕ ರಾತ್ರಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story