ಸುಹೈಲ್ ಕಂದಕ್ಗೆ ದ.ಕ. ಜಿಲ್ಲಾ ಪ್ರಶಸ್ತಿ
ಸುಹೈಲ್ ಕಂದಕ್
ಮಂಗಳೂರು: ನಗರದ ಅತ್ತಾವರ ನಿವಾಸಿ, ಸಮಾಜ ಸೇವಕ ಸುಹೈಲ್ ಕಂದಕ್ ಅವರನ್ನು 2024ನೆ ಸಾಲಿನ ದ.ಕ.ಜಿಲ್ಲಾ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಸಾಮಾಜಿಕ ಮತ್ತು ಕ್ರೀಡಾಕ್ಷೇತ್ರದಲ್ಲಿ ಮಾಡಿದ ಸೇವೆಯನ್ನು ಗುರುತಿಸಿ ದ.ಕ.ಜಿಲ್ಲಾಡಳಿತ ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಅಖಿಲ ಭಾರತ ಅಲ್ಪಸಂಖ್ಯಾತ ಕೌನ್ಸಿಲ್ ಮತ್ತು ಕರ್ನಾಟಕ ರಾಜ್ಯ ಭ್ರಷ್ಟಾಚಾರ ವಿರೋಧಿ ಹಾಗೂ ಮಾನವ ಹಕ್ಕುಗಳ ಮಂಡಳಿಯಲ್ಲಿ ಸೇವೆ ಸಲ್ಲಿಸುತ್ತಿರುವ ಸುಹೈಲ ಕಂದಕ್ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಕೋವಿಡ್ ಸಂದರ್ಭ ಮಾನವೀಯ ಸಲ್ಲಿಸಿದ್ದ ಇವರು ಪೊಲೀಸ್ ದೌರ್ಜನ್ಯದ ವಿರುದ್ಧವೂ ಹೋರಾಟ ಮಾಡಿ ಗಮನ ಸೆಳೆದಿದ್ದರು. ಅನೇಕ ಜನಪರ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
Next Story