ವಿಟ್ಲ: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಕಾರು
ವಿಟ್ಲ, ಮೇ 5: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಉರುಳಿಬಿದ್ದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಆದರೆ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದವರು ವಿಟ್ಲ ಮೂಲದವರೆನ್ನಲಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.
Next Story