ದಾವಣಗೆರೆ: ಮದ್ಯದ ಅಮಲಿನಲ್ಲಿ ಪತ್ನಿಯನ್ನು ಕೊಲೆಗೈದ ಪತಿ
ದಾವಣಗೆರೆ : ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ದಾವಣಗೆರೆ ತಾಲೂಕಿನ ಶಿರಮಗೊಂಡನಹಳ್ಳಿಯಲ್ಲಿ ಗುರುವಾರ ನಡೆದಿದೆ.
ಮೃತ ಮಹಿಳೆಯನ್ನು ಅರ್ಪಿತಾ(24) ಎಂದು ಗುರುತಿಸಲಾಗಿದೆ. ಗ್ರಾಮದೇವತೆಯ ಜಾತ್ರೆಯ ಹಿನ್ನಲೆಯಲ್ಲಿ ಮನೆಗೆ ಕುಟುಂಬಸ್ಥರು ಆಗಮಿಸಿದ್ದರು. ಈ ವೇಳೆ ಕಂಠ ಪೂರ್ತಿ ಕುಡಿದು ಬಂದಿದ್ದ ಆರೋಪಿ ಹನುಮಂತ(28) ಪತ್ನಿ ಅರ್ಪಿತಾಳಿಗೆ ಹೊಡೆದಿದ್ದು, ಕಿವಿಯಲ್ಲಿ ತೀವ್ರ ರಕ್ತಸ್ರಾವವಾಗಿ ಆಕೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಕುಮಾರ ಸಂತೋಷ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Next Story