ಮಾಜಿ ಸಚಿವ ಬಿಸಿ ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಆತ್ಯಹತ್ಯೆ
ದಾವಣಗೆರೆ: ಮಾಜಿ ಸಚಿವ ಬಿಸಿ ಪಾಟೀಲ್ ಅವರ ಅಳಿಯ ಪ್ರತಾಪ್ ಕುಮಾರ್ ಕೆಜಿ (41) ವಿಷ ಸೇವಿಸಿ ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರ್ ನಲ್ಲಿಸಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.
ಮಾಜಿ ಸಚಿವ ಬಿಸಿ ಪಾಟೀಲ್ ಪುತ್ರಿಯ ಪತಿ ಪ್ರತಾಪ್ ಕುಮಾರ್ ಅವರ ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Next Story