Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಾವಣಗೆರೆ
  4. ಕೃಷಿಗೆ 7 ತಾಸು ವಿದ್ಯುತ್ ಪೂರೈಕೆಗೆ...

ಕೃಷಿಗೆ 7 ತಾಸು ವಿದ್ಯುತ್ ಪೂರೈಕೆಗೆ ಸರಕಾರ ಬದ್ದ : ಸಚಿವ ಕೆ.ಜೆ.ಜಾರ್ಜ್

"ಕುಸುಮ್- ಸಿ ಅಡಿ ಮುಂದಿನ ಒಂದೂವರೆ ವರ್ಷದಲ್ಲಿ 3,000 ಮೆ.ವ್ಯಾ. ವಿದ್ಯುತ್ ಉತ್ಪಾದನೆ ಗುರಿ"

ವಾರ್ತಾಭಾರತಿವಾರ್ತಾಭಾರತಿ18 Feb 2025 7:07 PM IST
share
ಕೃಷಿಗೆ 7 ತಾಸು ವಿದ್ಯುತ್ ಪೂರೈಕೆಗೆ ಸರಕಾರ ಬದ್ದ : ಸಚಿವ ಕೆ.ಜೆ.ಜಾರ್ಜ್

ದಾವಣಗೆರೆ : ಕೃಷಿ ಪಂಪ್ ಸೆಟ್ ಗಳಿಗೆ ದಿನದ 7 ತಾಸು ತ್ರಿ ಫೇಸ್ ಹಾಗೂ ಗೃಹ ಬಳಕೆ ಮತ್ತು ಕೈಗಾರಿಕೆಗಳಿಗೆ ದಿನದ 24 ಗಂಟೆ ವಿದ್ಯುತ್ ಪೂರೈಸುವುದು ಸರ್ಕಾರದ ನೀತಿಯಾಗಿದ್ದು, ಇದಕ್ಕೆ ಬದ್ದವಾಗಿ ವಿದ್ಯುತ್ ನೀಡಲಾಗುತ್ತಿದೆ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ವರ್ಷ ವಿದ್ಯುತ್ ಕೊರತೆ ಇಲ್ಲ. ಕೆಲವೊಂದು ತಾಂತ್ರಿಕ ಸಮಸ್ಯೆಯಿಂದ ಕೆಲವು ಪ್ರದೇಗಳಲ್ಲಿ ನಿರ್ವಹಣಾ ಕಾರ್ಯಗಳಿಗಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದೆಯೇ ಹೊರತು ಲೋಡ್ ಶೆಡ್ಡಿಂಗ್ ಇಲ್ಲ. ಸರ್ಕಾರದ ಬದ್ದತೆಯಂತೆ ಸಮರ್ಪಕ ವಿದ್ಯುತ್ ಪೂರೈಕೆಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.

ರಾಜ್ಯದಲ್ಲಿ ಪ್ರತಿನಿತ್ಯ 18,500 ಮೆಗಾವ್ಯಾಟ್ ಬೇಡಿಕೆ ಇದ್ದು, ಬೇಸಿಗೆ ಆರಂಭವಾಗಿರುವುದರಿಂದ ಸರಾಸರಿಗಿಂತ ಶೇ.10 ರಷ್ಟು ವಿದ್ಯುತ್ ಬೇಡಿಕೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಪಂಜಾಬ್ ಮತ್ತು ಉತ್ತರ ಪ್ರದೇಶಗಳಿಂದ ವಿನಿಮಯ ಆಧಾರದಲ್ಲಿ ವಿದ್ಯುತ್ ಪಡೆಯಲಾಗುತ್ತಿದೆ. ರಾಜ್ಯಲ್ಲಿ ವಿದ್ಯುತ್ ಬೇಡಿಕೆ ಕುಸಿದಾಗ ಅಂದರೆ ಜೂನ್‍ನಿಂದ ಆ ರಾಜ್ಯಗಳಿಗೆ ವಿದ್ಯುತ್ ವಾಪಸ್ ನೀಡಾಗುತ್ತದೆ. ಅದಕ್ಕಾಗಿ ಅಲ್ಲಿಂದ ಗ್ರಿಡ್ ಮೂಲಕ ವಿದ್ಯುತ್ ಪಡೆಯಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಗುಣಮಟ್ಟದ ವೋಲ್ಟೇಜ್‍ಗಾಗಿ ಅಗತ್ಯವಿರುವ ಕಡೆ ವಿದ್ಯುತ್ ಉಪ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ.ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದ್ದು, ಅಗತ್ಯ ಇರುವ ಕಡೆ ಸ್ಥಾಪಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಕುಸುಮ್- ಸಿ ಅಡಿ 3,000 ಮೆ.ವ್ಯಾ. ವಿದ್ಯುತ್ ಉತ್ಪಾದನೆ ಗುರಿ:

ಕುಸುಮ್- ಸಿ ಯೋಜನೆಯಡಿ ಮುಂದಿನ ಒಂದೂವರೆ ವರ್ಷದಲ್ಲಿ ಫೀಡರ್ ಸೋಲರೈಸೇಷನ್ ಮೂಲಕ 3,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹೊಂದಲಾಗಿದೆ. ಈಗಾಗಲೇ ಈ ಕಾಮಗಾರಿಗೆ ವಿವಿಧ ಸಂಸ್ಥೆಗಳಿಗೆ ಕಾರ್ಯಾದೇಶ ನೀಡಿದ್ದು, ಸೋಲಾರ್ ಪ್ಯಾನಲ್ ಅಳವಡಿಕೆ, ವಿದ್ಯುತ್ ಉತ್ಪಾದನೆ ಹಂತ, ಭೂಮಿ ಸಮತಟ್ಟು ಮಾಡುವ ಕೆಲಸ ಪ್ರಗತಿಯಲ್ಲಿದೆ. ಬರುವ ಏಪ್ರಿಲ್‍ನಲ್ಲಿ 300 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿ ಗ್ರಿಡ್‍ಗೆ ಕಳುಹಿಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದರು.

ಗೃಹಜ್ಯೋತಿ;

ದಾವಣಗೆರೆ ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ 4,33,897 ಆರ್.ಆರ್.ಸಂಖ್ಯೆಗಳು ನೋಂದಣಿಯಾಗಿದ್ದು, ವಿದ್ಯುತ್ ಸಂಪರ್ಕ ಪಡೆದ ಸ್ಥಾವರಗಳಲ್ಲಿ ಶೇ 88.93 ರಷ್ಟು ಈ ಯೋಜನೆಯಡಿ ಇದೆ. ಈ ಸ್ಥಾವರಗಳಿಗೆ 2023 ರ ಆಗಸ್ಟ್ ನಿಂದ 2024 ರ ಡಿಸೆಂಬರ್ ಅಂತ್ಯದವರೆಗೆ 309 ಕೋಟಿ ರೂ. ಮೊತ್ತದ ವಿದ್ಯುತ್ತನ್ನು ಗ್ರಾಹಕರಿಗೆ ಉಚಿತವಾಗಿ ನೀಡಲಾಗಿದೆ ಎಂದು ಹೇಳಿದರು

ಪಂಪ್‍ಸೆಟ್‍ಗಳಿಗೆ ಶೀಘ್ರ ಸಂಪರ್ಕಕ್ಕೆ ಕ್ರಮ:

ರೈತರ ಕೃಷಿ ಪಂಪ್‍ಸೆಟ್‍ಗಳಿಗೆ 2004 ರಿಂದಲೂ ಅಕ್ರಮ-ಸಕ್ರಮ ಎಂಬ ಕಾರ್ಯಕ್ರಮದಡಿ ಅನಧಿಕೃತ ಸಂಪರ್ಕವನ್ನು ಸಕ್ರಮ ಮಾಡುತ್ತಾ ಬರಲಾಗಿದೆ. ಇದರಡಿ ಮೂಲಭೂತ ಸೌಕರ್ಯದಡಿ ಮಾರ್ಗ, ಟಿಸಿ ಅಳವಡಿಕೆ ಮಾಡಲಾಗಿದೆ. ಜಿಲ್ಲೆಯಲ್ಲಿ ಬಾಕಿ ಇರುವ 4,946 ಪಂಪ್‍ಸೆಟ್‍ಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಟೆಂಡರ್ ಕರೆಯಲಾಗಿದೆ. ರೈತರು ಸ್ವಂತ ಮೂಲಭೂತ ಸೌಕರ್ಯ ಮಾಡಿಕೊಂಡು ಕೃಷಿ ಪಂಪ್‍ಸೆಟ್‍ಗಳಿಗೆ ತಕ್ಷಣವೇ ಸಂಪರ್ಕ ಪಡೆಯಲು ಹಾಗೂ ಇಲಾಖೆಯಿಂದ ಮೂಲಭೂತ ಸೌಕರ್ಯಕ್ಕಾಗಿ ಸರತಿಯಲ್ಲಿ ಕಾಯುವ ಎರಡು ಅವಕಾಶಗಳನ್ನು ಮಾಡಿಕೊಟ್ಟಲ್ಲಿ ಸ್ವಂತವಾಗಿ ಮಾಡಿಕೊಳ್ಳುವ ರೈತರಿಗೆ ಅನುಕೂಲವಾಗುತ್ತದೆ ಎಂಬ ಚಿಂತನೆ ಮಾಡಲಾಗಿದೆ ಎಂದರು.

ಸಭೆಯಲ್ಲಿ ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ್, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ‌ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ್, ಜಿಲ್ಲಾ ‌ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸುರೇಶ್ ಇಟ್ನಾಳ್ ಮತ್ತಿತರರು ಇದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X