ಹರೀಶ್ ನಾಯ್ಕ್ ನಿಧನ
ಪುತ್ತೂರು: ಕಳೆದ ಹಲವಾರು ವರ್ಷಗಳಿಂದ ಪುತ್ತೂರಿನ ತಾಲೂಕು ಕಚೇರಿ ಸಿಬ್ಬಂದಿಯಾಗಿದ್ದ ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಕರ್ಕುಂಜ ನಿವಾಸಿ ಹರೀಶ್ ನಾಯ್ಕ್(45) ಅಲ್ಪ ಕಾಲದ ಅಸೌಖ್ಯದಿಂದ ಮಂಗಳವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅವರು ಕಳೆದ 25 ವರ್ಷಗಳಿಂದ ಪುತ್ತೂರು ತಾಲೂಕು ಕಚೇರಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ರೆಕಾರ್ಡ್ ರೂಂ ನಿರ್ವಹಣೆ ಉದ್ಯೋಗಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಮೃತರು ತಂದೆ, ತಾಯಿ, ಪತ್ನಿ, ಪುತ್ರ, ಇಬ್ಬರು ಸಹೋದರರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
Next Story