ಮಂಚಿ: ಗ್ರಾಮ ಪಂಚಾಯತ್ ಮಾಜಿ ಸದಸ್ಯ ಮೊಯಿದಿನ್ ಕುಂಞಿ ನಾಡಾಜೆ
ಬಂಟ್ವಾಳ: ಮಂಚಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಮೊಯಿದಿನ್ ಕುಂಞಿ ನಾಡಾಜೆ ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಸಂಜೆ ನಿಧನರಾದರು.
ಮಂಚಿ ಕುಕ್ಕಾಜೆಯಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರಾಗಿದ್ದು 3 ಅವಧಿಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾಗಿ ಆಯ್ಕೆಗೊಂಡು ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು.
ನಾಡಾಜೆ ಮಸೀದಿಯಲ್ಲಿ ಮತ್ತು ಮಂಚಿ ಎಸ್.ವೈ.ಎಸ್, ಮುಸ್ಲಿಂ ಸಂಯುಕ್ತ ಜಮಾತ್ ನಲ್ಲಿ ಸಕ್ರಿಯ ನಾಯಕರಿಗಿದ್ದರು. ಮಂಚಿ ಉಸ್ತಾದ್ ಇಬ್ರಾಹಿಂ ಮುಸ್ಲಿಯಾರ್ ರವರ ಸಹೋದರನಾಗಿದ್ದು ಪತ್ನಿ, 4 ಗಂಡು ಮತ್ತು ಮೂವರು ಹೆಣ್ಣು ಮಕ್ಕಳು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ವಿಧಾನ ಸಭಾ ಸ್ಪೀಕರ್ ಯು ಟಿ ಖಾದರ್ ಆಸ್ಪತ್ರೆಗೆ ಭೇಟಿ ನೀಡಿ ಮೃತ ದೇಹದ ಅಂತಿಮ ದರ್ಶನ ಪಡೆದರು.
ಮಾಜಿ ಸಚಿವರಾದ ರಮಾನಾಥ ರೈ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಂ ಎಸ್ ಮೊಹಮ್ಮದ್, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಅಬ್ಬಾಸ್ ಅಲಿ, ಮುಡಿಪು ಬ್ಲಾಕ್ ಕಾಂಗ್ರೆಸ್ ವಕ್ತಾರ ಅಬ್ದುಲ್ ರಝಾಕ್ ಕುಕ್ಕಾಜೆ, ಸಾಲೆತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ಹಸೈನಾರ್, ಕೊಳ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಭಾಶ್ ಚಂದ್ರ ಶೆಟ್ಟಿ, ಸಂತಾಪ ಸೂಚಿಸಿದ್ದಾರೆ.