ಇಸ್ಮಾಯಿಲ್ ಹಾಜಿ
ಕೊಣಾಜೆ, ಡಿ.30: ಕೊಣಾಜೆ ಸಮೀಪದ ನಡುಪದವು ನಿವಾಸಿ, ಹಿರಿಯ ಉದ್ಯಮಿ, ಸಾಮಾಜಿಕ ಮುಂದಾಳು ಇಸ್ಮಾಯಿಲ್ ಹಾಜಿ (78) ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಶನಿವಾರ ಮುಂಜಾನೆ ನಿಧನರಾದರು.
ಪತ್ನಿ, ಮೂವರು ಪುತ್ರರು ಮತ್ತು ಓರ್ವ ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಮೃತರು ಅಗಲಿದ್ದಾರೆ.
ನಡುಪದವು ಅಲ್ ಉಮರ್ ಜುಮಾ ಮಸೀದಿಯ ಅಧ್ಯಕ್ಷರಾಗಿ ಇಸ್ಮಾಯೀಲ್ ಹಾಜಿ ಸೇವೆ ಸಲ್ಲಿಸಿದ್ದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಜಮೀನನ್ನು ಖಾಸಗಿ ವ್ಯಕ್ತಿಗಳು ಅತಿಕ್ರಮಿಸಿದಾಗ ಅದರ ವಿರುದ್ಧ ಹೋರಾಟಕ್ಕಾಗಿ ರಚಿಸಲಾದ ಸಮಿತಿಯ ಅಧ್ಯಕ್ಷರಾಗಿ ಸುದೀರ್ಘ ಕಾಲ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಕಾನೂನು ಹೋರಾಟ ನಡೆಸಿ ಶಾಲೆಯ ಜಮೀನನ್ನು ಮರಳಿ ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
Next Story