ಎಕೆ ಮೊಹಿಯುದ್ದಿನ್
ಉಳ್ಳಾಲ: ಹಿರಿಯ ಕಾಂಗ್ರೆಸ್ ಮುಂದಾಳು ಆಗಿದ್ದ ಎಕೆ ಮೊಹಿಯುದ್ದಿನ್ (76)ಕೋಟೆಪುರ ರವರು ಅಲ್ಪಕಾಲದ ಅನಾರೋಗ್ಯದಿಂದಾಗಿ ರವಿವಾರ ಮದ್ಯಾಹ್ನ ಸ್ವಗೃಹದಲ್ಲಿ ನಿಧನ ಹೊಂದಿದರು.
ಉಳ್ಳಾಲ ದರ್ಗಾ ಚಾರಿಟೇಬಲ್ ಟ್ರಸ್ಟ್ ಜೊತೆ ಕಾರ್ಯದರ್ಶಿ ಆಗಿ ಸೇವೆ ಸಲ್ಲಿಸಿದ್ದ ಅವರು ಸಮಾಜ ಸೇವೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದರು. ಟೌನ್ ಪಂಚಾಯತ್ ಮಾಜಿ ಸದಸ್ಯರಾಗಿದ್ದ ಅವರು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ನ ಉಪಾಧ್ಯಕ್ಷರಾಗಿ ಸೇವೆ ಮಾಡಿದ್ದರು.
ಮೃತರು ಮೂವರು ಪುತ್ರರು ಗಂಡು, ಓರ್ವ ಪುತ್ರಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಎ.ಕೆ. ಮೊಯ್ದಿನ್ ನಿಧನಕ್ಕೆ ಕಾಂಗ್ರೆಸ್ ಮುಖಂಡ ಫಾರೂಕ್ ಉಳ್ಳಾಲ್ ಸಂತಾಪ ಸೂಚಿಸಿದ್ದಾರೆ
Next Story