ಭಾಸ್ಕರ ಶೆಟ್ಟಿ
ಶಿರ್ವ: ನಿಂಜೂರು ಶ್ರೀಮಹಾಬಲೇಶ್ವರ ಹಿಂದೂ ಹಿರಿಯ ಪ್ರಾಥಮಿಕ ಶಾಲಾ ನಿವೃತ್ತ ಮುಖ್ಯ ಶಿಕ್ಷಕ ಭಾಸ್ಕರ ಶೆಟ್ಟಿ(78) ಮಂಗಳವಾರ ಅಲ್ಪಕಾಲದ ಅಸೌಖ್ಯದಿಂದ ಬೆಳಂಜಾಲೆ ಸ್ವಗೃಹದಲ್ಲಿ ನಿಧನರಾದರು.
ವಿವಿಧ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಸಕ್ರೀಯರಾಗಿದ್ದ ಇವರು, ಮಾರ್ಗದರ್ಶಕರೂ ಆಗಿದ್ದರು. ಅವರು ಪತ್ನಿ, ಓರ್ವ ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಕರ್ನಾಟಕ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಿರ್ವ ಗ್ರಾಪಂ ಮಾಜಿ ಉಪಾಧ್ಯಕ್ಷ ದೇವದಾಸ್ ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Next Story