ಪ್ರೊ.ಐ.ನಾರಾಯಣ
ಉಡುಪಿ, ಡಿ.23: ಮಣಿಪಾಲ ಎಂಐಟಿಯ ಭೌತಶಾಸ್ತ್ರದ ಉಪನ್ಯಾಸಕರಾಗಿ, ವಿಭಾಗ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ರೋಟರಿಯ ಮಾಜಿ ಗವರ್ನರ್, ಯಕ್ಷಗಾನ ಕಲಾರಂಗದ ಸ್ಥಾಪಕ ಕಾರ್ಯದರ್ಶಿ ಪ್ರೊ.ಐ.ನಾರಾಯಣ (84) ಸೋಮವಾರ ದೀರ್ಘ ಕಾಲದ ಅಸೌಖ್ಯದಿಂದ ನಿಧನರಾದರು.
ಸಾಹಿತ್ಯ, ಸಂಗೀತ ಹಾಗೂ ಕ್ರೀಡೆಗಳಲ್ಲಿ ಸಕ್ರಿಯರಾಗಿದ್ದ ಇವರು ಮಣಿಪಾಲ ಸಾಹಿತ್ಯ ಸಂಘದಲ್ಲಿ ದೀರ್ಘಕಾಲ ಕಾರ್ಯನಿರ್ವಹಿಸಿದ್ದರು. ಜೇಸಿಐ ಸಂಘಟನೆಯಲ್ಲೂ ತೊಡಗಿಸಿಕೊಂಡಿದ್ದರು.
ಪ್ರೊ.ನಾರಾಯಣ ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಮತ್ತು ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Next Story