ಗಿರಿಜಾ ಶಂಕರ್ ತುದಿಯಡ್ಕ
ಸುಳ್ಯ, ಡಿ.30: ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ.ತುದಿಯಡ್ಕ ವಿಷ್ಣಯ್ಯ ಅವರ ಪುತ್ರ ಆಲೆಟ್ಟಿ ಗ್ರಾಮದ ತುದಿಯಡ್ಕ ನಿವಾಸಿ ಗಿರಿಜಾ ಶಂಕರ ತುದಿಯಡ್ಕ (63) ಅವರು ಅಸೌಖ್ಯದಿಂದ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ನಿಧನ ಹೊಂದಿದರು.
ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು, ಸಹೋದರರಾದ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ, ಆಲೆಟ್ಟಿ ಸೊಸೈಟಿ ಮಾಜಿ ಅಧ್ಯಕ್ಷ ಕೃಪಾಶಂಕರ ತುದಿಯಡ್ಕ, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.
ರವಿವಾರ ಸಂಜೆ ಮನೆಯಲ್ಲಿ ಕುಸಿದು ಬಿದ್ದ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿತ್ತು. ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿದ್ದ ಕಾರಣದಿಂದಾಗಿ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಗಿರಿಜಾ ಶಂಕರದ ಅವರು ಪ್ರಗತಿಪರ ಕೃಷಿಕರಾಗಿದ್ದು, ರೋಟರಿ ಕ್ಲಬ್ ಅಧ್ಯಕ್ಷರಾಗಿ, ರೋಟರಿ ಕ್ಲಬ್ ಚಾರಿಟಬಲ್ ಟ್ರಸ್ಟ್ ಸಂಚಾಲಕರಾಗಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು.