ಉದ್ಯಮಿ ಅಶೋಕ ಶೇಟ್

ಮಂಗಳೂರು, ಜ.22 : ನಗರದ ಶ್ವೇತಾ ಜುವೆಲ್ಲರ್ಸ್‌ನ ಮಾಲಕ, ದೈವಜ್ಞ ಬ್ರಾಹ್ಮಣ ಸಮಾಜದ ಕ್ರಿಯಾಶೀಲ ವ್ಯಕ್ತಿ ಎಂ. ಅಶೋಕ್ ಶೇಟ್ (64) ಬುಧವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಪತ್ನಿ,ಮೂವರು ಪುತ್ರಿಯರನ್ನು ಮೃತರು ಅಗಲಿದ್ದಾರೆ.
ದೈವಜ್ಞ ಯುವಕ ಮಂಡಳಿಯ ಅಧ್ಯಕ್ಷರಾಗಿ, ಲಯನ್ಸ್ ಕ್ಲಬ್ ಸೇವಾ ಸಂಸ್ಥೆ, ದೈವಜ್ಞ ಬ್ರಾಹ್ಮಣ ಸಂಘ ಹಾಗೂ ಮಂಗಳೂರು ದೈವಜ್ಞ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ಮಂಗಳೂರು ದೈವಜ್ಞ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಮುಖ್ಯ ಪ್ರವರ್ತಕರಾಗಿದ್ದ ಅಶೋಕ್ ಶೇಟ್ ದೈವಜ್ಞ ಸೌರಭ ಪತ್ರಿಕೆಯ ಸಂಸ್ಥಾಪಕ ಪ್ರಕಾಶಕರಾಗಿದ್ದರು. ಸಾಂಸ್ಕೃತಿಕ, ಧಾರ್ಮಿಕ, ಶೈಕ್ಷಣಿಕ ಚಟುವಟಿಕೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದ ಅವರು ಸ್ನೇಹಜೀವಿಯಾಗಿದ್ದರು.
Next Story