ಶಿರ್ವ, ಆ.28: ಶಿರ್ವ ಸುನ್ನಿ ಜಾಮಿಯಾ ಮಸೀದಿ ಆಡಳಿತ ಮಂಡಳಿಯ ಮಾಜಿ ಅಧ್ಯಕ್ಷ, ಕೊಡುಗೈ ದಾನಿ ರಹಮ್ಮತುಲ್ಲಾ ಅಬ್ದುಲ್ ಖಾದರ್(77) ಅಲ್ಪಕಾಲದ ಅಸೌಖ್ಯದಿಂದ ರವಿವಾರ ನಿಧನರಾದರು.
ಶಿರ್ವ ರೋಟರಿಯ ಸಕ್ರೀಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಇವರು, ನಾಲ್ವರು ಪುತ್ರರು, ಸೊಸೆಯಂದಿರು, ಮೊಮಕ್ಕಳು ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.