ಹುಬ್ಬಳ್ಳಿ | ಬ್ಯಾಂಕ್ ದರೋಡೆಗೆ ವಿಫಲ ಯತ್ನ; ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ ಪೊಲೀಸ್

ಹುಬ್ಬಳ್ಳಿ : ಬೀದರ್, ಮಂಗಳೂರು ಸೇರಿದಂತೆ ಸೇರಿದಂತೆ ರಾಜ್ಯದ ಕೆಲವೆಡೆ ದರೋಡೆ, ಕಳ್ಳತನ ಪ್ರಕರಣಗಳು ವರದಿಯಾಗುತ್ತಿದೆ. ಈ ಪ್ರಕರಣಗಳ ಬೆನ್ನು ಬಿದ್ದಿರುವ ಪೊಲೀಸರು, ಆರೋಪಿಗಳ ಬಂಧನಕ್ಕೆ ಬಲೆಬೀಸಿದ್ದಾರೆ. ಈ ಮಧ್ಯೆ ಹುಬ್ಬಳ್ಳಿಯಲ್ಲೂ ಬ್ಯಾಂಕ್ ದರೋಡೆಗೆ ಕಳ್ಳರು ಯತ್ನಿಸಿರುವಂತಹ ಘಟನೆ ನಡೆದಿದ್ದು, ಕೃತ್ಯ ಎಸಗಿದವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಸೋಮವಾರ ರಾತ್ರಿ ಹುಬ್ಬಳ್ಳಿಯ ಎಪಿಎಂಸಿಯಲ್ಲಿರುವ ಕೆನರಾ ಬ್ಯಾಂಕ್ ದರೋಡೆಗೆ ವಿಫಲ ಯತ್ನ ನಡೆದಿರುವುದು ಬೆಳಕಿಗೆ ಬಂದಿದೆ. ಬ್ಯಾಂಕ್ನ ಶೆಟರ್ ಬೀಗ ಮುರಿದು ದರೋಡೆಗೆ ಯತ್ನಿಸಿದ್ದು, ದುಷ್ಕರ್ಮಿಗಳ ಪ್ರಯತ್ನ ವಿಫಲವಾಗಿದೆ.
ಸದ್ಯ ಘಟನಾ ಸ್ಥಳಕ್ಕೆ ನವನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
Next Story