Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಪ್ರಹ್ಲಾದ್ ಜೋಶಿ, ಬೊಮ್ಮಾಯಿಗೆ ಯಾವುದೇ...

ಪ್ರಹ್ಲಾದ್ ಜೋಶಿ, ಬೊಮ್ಮಾಯಿಗೆ ಯಾವುದೇ ಕಾರಣಕ್ಕೂ ಮತ ಹಾಕಬೇಡಿ‌ : ಕಲ್ಯಾಣ ಸ್ವಾಮೀಜಿ

"ಬಿಜೆಪಿಯವರು ನೇಹಾ ಹಿರೇಮಠ್ ಪ್ರಕರಣವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ"

ವಾರ್ತಾಭಾರತಿವಾರ್ತಾಭಾರತಿ5 May 2024 6:23 PM IST
share
ಪ್ರಹ್ಲಾದ್ ಜೋಶಿ, ಬೊಮ್ಮಾಯಿಗೆ ಯಾವುದೇ ಕಾರಣಕ್ಕೂ ಮತ ಹಾಕಬೇಡಿ‌ : ಕಲ್ಯಾಣ ಸ್ವಾಮೀಜಿ

ಹುಬ್ಬಳ್ಳಿ : ಬಸವರಾಜ ಬೊಮ್ಮಾಯಿ ಮತ್ತು ಪ್ರಹ್ಲಾದ್ ಜೋಶಿಗೆ ಯಾವುದೇ ಕಾರಣಕ್ಕೂ ಮತ ಹಾಕಬೇಡಿ ಎಂದು ಬಳ್ಳಾರಿಯ ಕಲ್ಯಾಣ ಮಠದ ಕಲ್ಯಾಣ ಸ್ವಾಮೀಜಿ ಹೇಳಿದ್ದಾರೆ.

ಇಂದು ಹುಬ್ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಬಸವರಾಜ ಬೊಮ್ಮಯಿಯವರನ್ನು ಜನ ತಿರಸ್ಕರಿಸಬೇಕು. ಇವರಿಬ್ಬರು ತಾವು ಮಾಡಿದ ಅಭಿವೃದ್ಧಿ, ತಮ್ಮನ್ನು ನೋಡಿ ಮತ ಹಾಕಿ ಎಂದು ಹೇಳುತ್ತಿಲ್ಲ. ಮೇಲೆ ನೋಡಿ ಮತ ಹಾಕಿ ಎಂದು ಹೇಳುತ್ತಾ ಇದ್ದಾರೆ. ಇವರಿಗೆ ನೈತಿಕತೆ ಇಲ್ಲ" ಎಂದು ಆಕ್ರೋಶ ಹೊರಹಾಕಿದರು.

ಐದು ವರ್ಷ ಮಜಾ ಮಾಡಿದ್ದಾರೆ.

ʼಮೋದಿ ಹೆಸರಲ್ಲಿ ಗೆದ್ದು ಇವರು ಐದು ವರ್ಷ ಮಜಾ ಮಾಡಿದ್ದಾರೆ. ಆ ಪುಣ್ಯಾತ್ಮನ ಹೆಸರಿನಲ್ಲಿ ಗೆದ್ದು ಕ್ಷೇತ್ರದ ಅಭಿವೃದ್ಧಿ ಮಾಡಿಲ್ಲ. ಹಾವೇರಿ ಜಿಲ್ಲೆಯ ಜನ ಬೊಮ್ಮಾಯಿಗೆ ʼಗೋ ಬ್ಯಾಕ್ʼ ಎನ್ನುತ್ತಿದ್ದಾರೆ. ಅಲ್ಲದೆ, ಅವರು ಮುಖ್ಯಮಂತ್ರಿಯಾಗಿದ್ದಾಗ ಉತ್ತರ ಕರ್ನಾಟಕದ ಅಭಿವೃದ್ಧಿ ಮಾಡಬೇಕಾಗಿತ್ತು. ಸಾವಿರಾರು ಕೋಟಿ ರೂಪಾಯಿ ಅನುದಾನ ಕೊಟ್ಟು ಏಕೆ ಅಭಿವೃದ್ಧಿ ಮಾಡಲಿಲ್ಲʼ ಎಂದು ಪ್ರಶ್ನಿಸಿದರು.

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಜೋಶಿಯವರನ್ನು ಜನರೇ ತಿರಸ್ಕಾರ ಮಾಡುತ್ತಿದ್ದಾರೆ. ಬಸವರಾಜ ಬೊಮ್ಮಯಿ ಸರ್ಕಾರ ಇದ್ದಾಗ ಬೇಡ ಜಂಗಮ ಸರ್ಟಿಫಿಕೇಟ್‌ಗಾಗಿ ನಾವು 296 ದಿನ ಹೋರಾಟ ಮಾಡಿದರೆ, ನಮಗೇ ನ್ಯಾಯ ಕೊಟ್ಟಿಲ್ಲ. ಎಲ್ಲಾ ಸಮುದಾಯಕ್ಕೆ ನ್ಯಾಯ ಕೊಡುವಂತ ಕೆಲಸವನ್ನು ಇವರಿಬ್ಬರೂ ಮಾಡಿಲ್ಲ. ಎಲ್ಲಾ ಸಮುದಾಯ ಜನರು ಇವರಿಬ್ಬರಿಂದ ನೋವು ಅನುಭವಿಸಿದ್ದಾರೆ ಎಂದು ಹೇಳಿದರು.

ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ

ಬಿಜೆಪಿಯವರು ನೇಹಾ ಹಿರೇಮಠ ಪ್ರಕರಣವನ್ನ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ. ಮೊಸಳೆ ಕಣ್ಣೀರು ಹಾಕುವುದನ್ನ ಬಿಟ್ಟು ಬಿಡಿ. ರಾಜಕೀಯ ಲಾಭಕ್ಕಾಗಿ ಬಳಸಿಕೊಂಡ ರಾಕ್ಷಸರನ್ನು ಜನರೇ ತಿರಸ್ಕರಿಸಿಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X