ಹುಬ್ಬಳ್ಳಿ: ಚಾಕು ಇರಿತ ಪ್ರಕರಣ; ಆರೋಪಿ ಕಾಲಿಗೆ ಗುಂಡೇಟು
ಹುಬ್ಬಳ್ಳಿ: ಚಾಕು ಇರಿತ ಪ್ರಕರಣದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಹಳೇ ಹುಬ್ಬಳ್ಳಿಯಲ್ಲಿ ನಡೆದಿದೆ.
ಗುಂಡೇಟಿಗೆ ಒಳಗಾದ ಆರೋಪಿಯನ್ನು ಮುಝಮ್ಮಿಲ್ ಎಂದು ಗುರುತಿಸಲಾಗಿದೆ. ಈತ ಸೋಮವಾರ ರಾತ್ರಿ ನಡೆದ ಘಟನೆಯೊಂದರಲ್ಲಿ ಸಮೀರ್ ಶೇಖ್ ಹಾಗೂ ಜಾವೇದ್ ಎಂಬವರಿಗೆ ಚೂರಿ ಇರಿದಿದ್ದ ಎನ್ನಲಾಗಿದೆ.
ಪ್ರಕರಣ ದಾಖಲಿಸಿದ ಪೊಲೀಸರು ಮುಝಮ್ಮಿಲ್ ನನ್ನು ಬಂಧಿಸುವ ವೇಳೆ ಆತ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದಾನೆ ಎನ್ನಲಾಗಿದ್ದು, ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರಿಂದ ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ.
Next Story