Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಹುಬ್ಬಳ್ಳಿ | ದರೋಡೆ ಆರೋಪಿಗಳಿಬ್ಬರ...

ಹುಬ್ಬಳ್ಳಿ | ದರೋಡೆ ಆರೋಪಿಗಳಿಬ್ಬರ ಕಾಲಿಗೆ ಗುಂಡಿಕ್ಕಿ ಬಂಧನ: ಮೂವರು ಪರಾರಿ

ವಾರ್ತಾಭಾರತಿವಾರ್ತಾಭಾರತಿ4 Feb 2025 11:14 AM IST
share
ಹುಬ್ಬಳ್ಳಿ | ದರೋಡೆ ಆರೋಪಿಗಳಿಬ್ಬರ ಕಾಲಿಗೆ ಗುಂಡಿಕ್ಕಿ ಬಂಧನ: ಮೂವರು ಪರಾರಿ

ಹುಬ್ಬಳ್ಳಿ: ದರೋಡೆ ಮತ್ತು ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಕಾಲಿಗೆ ಗುಂಡಿಕ್ಕಿ ಬಂಧಿಸಿದ ಘಟನೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ಗುಜರಾತ್ ಮೂಲದ ದಿಲೀಪ್ ಮತ್ತು ನಿಲೇಶ್ ಬಂಧಿತ ಆರೋಪಿಗಳು. ಇವರ ಜೊತೆಗಿದ್ದ ಇತರ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ರಾತ್ರಿ ಬೈಕ್ ಸವಾರರನ್ನು ಸುಲಿಗೆ ಮಾಡಿ ಮನೆಯೊಂದರಿಂದ ದರೋಡೆಗೆ ಯತ್ನಿಸಿದ ಆರೋಪಿಗಳನ್ನು ಸೆರೆ ಹಿಡಿಯಲು ಮುಂದಾದಾಗ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಶೂಟೌಟ್ ಮಾಡಿದ್ದರಿಂದ ಗಾಯಗೊಂಡ ಇಬ್ಬರನ್ನು ಬಂಧಿಸಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಮೂವರು ಪೊಲೀಸ್ ಸಿಬ್ಬಂದಿಯನ್ನೂ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಂಧಿತರ ವಿರುದ್ಧ ಹಲವು ದರೋಡೆ ಪ್ರಕರಣ: ಪೊಲೀಸ್ ಆಯುಕ್ತ ಎನ್.ಶಶಿಕುಮಾರ್

ಘಟನೆಯ ಹಿನ್ನೆಲೆಯಲ್ಲಿ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಪೊಲೀಸ್ ಸಿಬ್ಬಂದಿಯ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಪೊಲೀಸ್ ಆಯುಕ್ತರು, ದರೋಡೆ ಪ್ರಕರಣಗಳ ಹಿನ್ನೆಲೆಯಲ್ಲಿ ಅವಳಿ ನಗರದಲ್ಲಿ 17 ಕಡೆ ನಾಕಾಬಂದಿ ಹಾಕಲಾಗಿತ್ತು. ಈ ಮಧ್ಯೆ ಸೋಮವಾರ ಮಧ್ಯಾರಾತ್ರಿ ಬೈಕ್ ಮೇಲೆ ಹೊರಟಿದ್ದ ಕುಂದಗೋಳ ಮೂಲದ ವ್ಯಕ್ತಿಯೊಬ್ಬರಿಗೆ ನಾಲ್ಕೈದು ಮಂದಿಯ ತಂಡ ಹಲ್ಲೆ ನಡೆಸಿದ ಬೈಕ್ ಸೇರಿ ನಗದು, ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದರು. ಇದಾದ ಸ್ವಲ್ಪ ಸಮಯದ ನಂತರ ರವಿಚಂದ್ರ ಎಂಬವರನ್ನು ಸುಲಿಗೆ ಮಾಡಿತ್ತು. ತದನಂತರ ಮಂಟೂರು ರಸ್ತೆಯಲ್ಲಿ ಶಾರಿಕ್ ಎಂಬವರ ಮನೆಗೆ ಕನ್ನ ಹಾಕಲು ಯತ್ನಿಸಿದ ಘಟನೆ ವರದಿಯಾಗಿತ್ತು. ಈ ವಿಚಾರ ತಿಳಿಯುತ್ತಿದ್ದಂತೆಯೇ ನಮ್ಮ ಸಿಬ್ಬಂದಿ ಅಲರ್ಟ್ ಆಗಿದ್ದರು. ಅನುಮಾನಾಸ್ಪದವಾಗಿ ಬೈಕ್ ಮೇಲೆ ವೇಗವಾಗಿ ಹೋಗುತ್ತಿದ್ದವರ ತಪಾಸಣೆಗೆ ಮುಂದಾಗಿದ್ದರು. ಈ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ದುಷ್ಕರ್ಮಿಗಳು ಪರಾರಿ ಆಗಲು ಯತ್ನಿಸಿದ್ದಾರೆ ಎಂದು ತಿಳಿಸಿದರು.

ದುಷ್ಕರ್ಮಿಗಳ ದಾಳಿಯಿಂದ ಪಿಎಸ್ಐ ಅಶೋಕ್ ಸೇರಿ ಮೂವರು ಸಿಬ್ಬಂದಿಗೆ ಗಾಯವಾಗಿದೆ. ಈ ವೇಳೆ ಪೊಲೀಸರು ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ. ಇದರಿಂದ ಇಬ್ಬರು ಆರೋಪಿಗಳಿಗೆ ತಲಾ ಒಂದು ಗುಂಡು ತಗುಲಿದೆ. ಇತರೆ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

ಗುಂಡೇಟು ತಿಂದ ದಿಲೀಪ್ ಮತ್ತು ನೀಲೇಶ್ ಗುಜರಾತ್ ಮೂಲದವರು. ಇವರಿಬ್ಬರ ಮೇಲೆ ಹಲವಾರು ಪ್ರಕರಣಗಳು ದಾಖಲಾಗಿವೆ. ಹುಬ್ಬಳ್ಳಿಯ ಜೈನ್ ಮಂದಿರದ ಹುಂಡಿಯಲ್ಲಿದ್ದ 4 ಲಕ್ಷ ರೂ. ಕಳವು ಪ್ರಕರಣ, ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣ ವ್ಯಾಪ್ತಿಯ ಎರಡು ಅಂಗಡಿಗಳಿಗೆ ಕನ್ನ ಹಾಕಿರುವ ಪ್ರಕರಣದಲ್ಲಿ ಇವರು ಆರೋಪಿಗಳು. ಉಳಿದಂತೆ ಇವರ ಮೇಲೆ ಗದಗ ದಲ್ಲಿ, ಬಳ್ಳಾರಿ, ಚಿತ್ರದುರ್ಗ ಸೇರಿ ಹಲೋ ಜಿಲ್ಲೆಗಳಲ್ಲಿ ಇವರ ಮೇಲೆ 15 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದವರು ತಿಳಿಸಿದರು.

ಉಳಿದ ಆರೋಪಿಗಳ ಬಂಧನಕ್ಕೆ ಜಾಲ ಬೀಸಲಾಗಿದೆ ಎಂದು ಶಶಿಕುಮಾರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X