ಹುಬ್ಬಳ್ಳಿ | ಮಹಿಳೆಯ ಜತೆ ಮಾತನಾಡಿದ್ದಕ್ಕೆ ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ; ಆರೋಪ

ಹುಬ್ಬಳ್ಳಿ: ವಿವಾಹಿತ ಮಹಿಳೆ ಜೊತೆ ಮಾತನಾಡಿದ್ದಾಗಿ ಆರೋಪಿಸಿ ಯುವಕನೊಬ್ಬನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿರುವಂತಹ ಘಟನೆ ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆಯ ಪಕ್ಕದ ಟಿಪ್ಪು ನಗರದಲ್ಲಿ ನಡೆದಿದೆ.
ಕಸಬಾಪೇಟೆ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿ ನಡೆದ ಘಟನೆ ನಡೆದಿದ್ದು, ಮುಜಾಫೀರ್ ಎಂಬ ಯುವಕನನ್ನು ಬೆತ್ತಲೆ ಮಾಡಿ ಹಲ್ಲೆ ಮಾಡಲಾಗಿದೆ .
ಹಲ್ಲೆಗೊಳಗಾದ ಮುಜಾಫೀರ್ ನಿನ್ನೆ (ಜ.21) ವಿವಾಹಿತ ಮಹಿಳೆ ಜೊತೆ ಮಾತಾಡಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯ ಸಂಬಂಧಿಕರು ಹತ್ತು ಹದಿನೈದು ಮಂದಿಯ ಗುಂಪು ಇಂದು (ಜ.22) ಮುಜಾಫೀರ್ ನನ್ನು ಅಪಹರಣ ಮಾಡಿ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದಾರೆ. ಅಲ್ಲದೇ ಬ್ಲೇಡ್ ನಿಂದ ಗಾಯಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ.
ಗಾಯಗೊಂಡ ಮುಜಾಫೀರ್‌ಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಕಸಬಾಪೇಟೆ ಠಾಣೆ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.
Next Story