ಹುಬ್ಬಳ್ಳಿ | ದರೋಡೆ ಪ್ರಕರಣ : ಆರೋಪಿ ಕಾಲಿಗೆ ಗುಂಡಿಕ್ಕಿ ಬಂಧನ
ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ ಆರೋಪಿ
ಹುಬ್ಬಳ್ಳಿ : ದರೊಡೆಕೋರ ಗುಂಪಿನ ಸದಸ್ಯನೊಬ್ಬನ ಮೇಲೆ ಗೋಕುಲ ರೋಡ್ ಪೊಲೀಸರು ಗುಂಡು ಹಾರಿಸಿ, ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಹೇಶ್ ಕಾಳೆ ಎಂದು ಗುರುತಿಸಲಾಗಿದೆ. ಸೋಮವಾರ ಬೆಳಗಿನ ಜಾವ ಆರೋಪಿ ಮಹೇಶ್ ಸೇರಿದಂತೆ ಈತನ ದರೋಡೆ ಗುಂಪು ಮನೆ ಕಳ್ಳತನಕ್ಕೆ ಇಳಿದಿತ್ತು. ಈ ವಿಚಾರ ತಿಳಿದು ಕಾರ್ಯಾಚರಣೆಗಿಳಿದ ಹುಬ್ಬಳ್ಳಿ ಪೊಲೀಸರು, ಆರೋಪಿ ಮಹೇಶ್ ಕಾಳೆಯನ್ನು ಬಂಧಿಸಿದ್ದು, ಈ ಸಂದರ್ಭದಲ್ಲಿ ಉಳಿದವರು ಪರಾರಿದ್ದಾರೆ ಎನ್ನಲಾಗಿದೆ.
ಬಳಿಕ ಉಳಿದ ದರೊಡೆಕೋರರು ಇರುವ ಜಾಗ ತೋರಿಸುತ್ತೇನೆ ಎಂದು ಮಹೇಶ್ ಕಾಳೆ ಪೊಲೀಸರನ್ನು ಕರೆದುಕೊಂಡು ಹೋಗಿದ್ದಾನೆ. ಈ ಮಧ್ಯೆ ಮಹೇಶ್ ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದಾನೆ. ಆತ್ಮ ರಕ್ಷಣೆಗಾಗಿ ಗೋಕುಲ ರೋಡ್ ಪೊಲೀಸ್ ಠಾಣೆಯ ಪಿಎಸ್ಐ ಸಚಿನ ದಾಸರೆಡ್ಡಿಯವರು ಆರೋಪಿ ಮಹೇಶ್ ಕಾಲಿಗೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.
ಗಾಯಗೊಂಡ ಆರೋಪಿ ಮಹೇಶ್ನನ್ನು ಹುಬ್ಬಳ್ಳಿ ಕಿಮ್ಸ್ಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಗೋಕುಲ ರೋಡ್ ಪೊಲೀಸ್ ಠಾಣೆಯ ಪಿಎಸ್ಐ ಸಚಿನ್ ಮತ್ತು ಕಾನ್ಸ್ಟೇಬಲ್ ವಸಂತ ಗುಡಿಗೇರಿಗೆ ಅವರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.