ಹುಬ್ಬಳ್ಳಿ | ಗಾಂಜಾ ಮಾರಾಟ ಜಾಲ ಪತ್ತೆ : 12 ಆರೋಪಿಗಳ ಬಂಧನ
ಬಂಧಿತ ಆರೋಪಿಗಳು
ಹುಬ್ಬಳ್ಳಿ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಹಳೇ ಹುಬ್ಬಳ್ಳಿ ಠಾಣಾ ವ್ಯಾಪ್ತಿಯ ಪೊಲೀಸರು 12 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇಲ್ಲಿನ ಅರವಿಂದನಗರ ಪಿ&ಟಿ ಕ್ವಾಟರ್ಸ್ನ ಪಾಳು ಬಿದ್ದ ಕಟ್ಟಡವೊಂದರಲ್ಲಿ ಗಾಂಜಾ ಮಾದಕ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ದೊರೆಯುತ್ತಿದ್ದಂತಯೇ ಹಳೇ ಹುಬ್ಬಳ್ಳಿ ಠಾಣೆಯ ಪೋಲಿಸರು ಜು.24ರ ರಾತ್ರಿ ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಈ ವೇಳೆ ಹಳೇ ಹುಬ್ಬಳ್ಳಿ ಗೋಡಕೆ ಪ್ಲಾಟ್ ನಿವಾಸಿ ಅಭಿಷೇಕ ಹನಮಂತ, ಗಣೇಶಪೇಟೆಯ ಮಹಮ್ಮದ್ ಅಯಾಝ್, ಈಶ್ವರನಗರದ ಇಸ್ಮಾಯಿಲ್, ಆನಂದನಗರದ ಜಾಫರ್ , ಮಹಮ್ಮದ್ ಸಾದಿಕ್, ರೋಶನ್ ಸೋಯೆಬ್ ಅಲಿಯಾಸ್ ಬಲ್ಲೂ ಜಮೀಲಾಹ್ಮದ್, ಸದರಸೋಪಾದ ಜುಬೇರಹ್ಮದ್, ಘೋಡಕೆ ಪ್ಲಾಟ್’ನ ಫುರ್ಕಾನ್, ಅಜ್ಮೀರ್ ನಗರದ ಶಾನವಾಝ್, ಸೊಹಿಲ್, ಮೆಹಬೂಬನಗರದ ಸಲೀಂ, ಕರೀಂ, ಬಂಧಿತರಾಗಿದ್ದಾರೆ.
ಬಂಧಿತರಿಂದ ಒಟ್ಟು ಒಂದು ಲಕ್ಷ ರೂ. ಮೌಲ್ಯದ 1 ಕೆಜಿ 365 ಗ್ರಾಂ ಗಾಂಜಾ, 2 ಸಾವಿರ ರೂ. ನಗದು, 3 ದ್ವಿಚಕ್ರ ವಾಹನ ಹಾಗೂ 9 ಮೊಬೈಲ್ ವಶಪಡಿಸಿಕೊಂಡಿದ್ದು, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.